newsics.com
ನವದೆಹಲಿ : ಯುವತಿ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಈ ಮೂಲಕ ಶವದ ಮೇಲಿನ ‘ಲೈಂಗಿಕ ಕ್ರಿಯೆ’ ಅತ್ಯಾಚಾರವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ. ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. 21 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಆರೋಪಿಗಳು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಸಂಬಂಧ ಪೊಲೀಸರು ಕೊಲೆ ಜತೆ ಅತ್ಯಾಚಾರ ಕೇಸ್ ದಾಖಲಿಸಿದ್ದರು. ಆದ್ರೆ, ಹೈಕೋರ್ಟ್, ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ ವಜಾ ಮಾಡಿದೆ.
ಪ್ರಕರಣದಲ್ಲಿ 21ವರ್ಷದ ಯುವತಿಯನ್ನು ಕೊಲೆಮಾಡಲಾಗಿತ್ತು. ಬಳಿಕ ಆರೋಪಿಗಳು, ಮೃತದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು, ಆರೋಪಿಗಳ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು 2023ರಲ್ಲಿ ತೀರ್ಪು ನೀಡಿತ್ತು. ಆದ್ರೆ, ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಗೊಲಗೇನಹಳ್ಳಿಯ ನಿವಾಸಿಯಾದ ಅಪರಾಧಿಯು ಮಹಿಳೆಯನ್ನು ಕೊಲೆ ಮಾಡಿ ನಂತರ ಅತ್ಯಾಚಾರ ಎಸಗಿದ್ದ. ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು ಕೊಲೆಯ ಆರೋಪಕ್ಕೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 302ರ ಅಡಿಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಶವ ಸಂಭೋಗ ನಡೆಸಿದ್ದಕ್ಕಾಗಿ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಅಪರಾಧಿಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿತ್ತು. ಆದರೆ, ಅತ್ಯಾಚಾರ ಸಂಬಂಧ ವಿಧಿಸಿದ್ದ ಶಿಕ್ಷೆಯನ್ನು ವಜಾಗೊಳಿಸಿತ್ತು.