Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?
ದೇಶಪ್ರಮುಖ

ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?

Share
2 Min Read
Manish Pandey Has Separated From Ashrita Shetty? Fans Wonder As The Duo Removes Their Wedding Pics
SHARE

Newsics.com

ಬೆಂಗಳೂರು: ಟೀಮ್​ ಇಂಡಿಯಾದ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್​ಸ್ಟಾಗ್ರಾಮ್​ ಖಾತೆಯ ಪೋಸ್ಟ್​.

2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದೀಗ ಈ ಜೋಡಿ ಸದ್ಯದಲ್ಲೇ ದೂರವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಹೌದು, ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ತಮ್ಮ ತಮ್ಮ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದ ಮದುವೆ ಮತ್ತು ಅವರಿಬ್ಬರ ಫೋಟೋಗಳನ್ನು ಇಬ್ಬರೂ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಇವರ ದಾಂಪತ್ಯದಲ್ಲಿ ಏರುಪೇರಾಗಿದ್ದು, ಇಬ್ಬರೂ ಪರಸ್ಪರ ಬೇರೆಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

https://www.instagram.com/p/C8ZSKIPPCZE/?img_index=

ಮನೀಶ್ ಪಾಂಡೆ ಅವರು ಐಪಿಎಲ್ 2024ರ ಟೂರ್ನಿಯಲ್ಲಿ ತಾವು ಪ್ರತಿನಿಧಿಸಿದ್ದ ಕೆಕೆಆರ್ ತಂಡದ ಮತ್ತು ಟ್ರೋಫಿ ಜೊತೆಗಿರುವ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಫೋಟೋಗಳ ಲಿಸ್ಟ್ ನಲ್ಲಿ ಪತ್ನಿ ಆಶ್ರಿತಾ ಜತೆಗಿರುವ ಫೋಟೋ ಮಾಯವಾಗಿದೆ. ಇದು ಅಭಿಮಾನಿಗಳ ಶಂಕೆಗೆ ಕಾರಣವಾಗಿದ್ದು ಇಬ್ಬರೂ ಪರಸ್ಪರ ಬೇರೆ ಬೇರೆಯಾಗುತ್ತಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಈ ಬಗ್ಗೆ ಈ ಜೋಡಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ
TAGGED:Manish Pandey Has Separated From Ashrita Shetty? Fans Wonder As The Duo Removes Their Wedding Pics
Share This Article
Facebook Twitter Copy Link Print
Previous Article ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ
Next Article June full moon: What the solstice strawberry moon means for your zodiac ರೋಸ್ ಮೂನ್ ಗೋಚರ: ಮಿಸ್ ಮಾಡದೇ ನೋಡಿ, ಇದಕ್ಕೂ ಹನಿಮೂನ್‌ಗೂ ಇದೆ ಸಂಬಂಧ!

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?