Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ
ಕರ್ನಾಟಕ

ಬಿಜೆಪಿ ಮುಖಂಡ ರಾಜೇಶ್ ಮನೆ ನೆಲಸಮ, ಪುತ್ತೂರು ಮಹಾಲಿಂಗೇಶ್ವರ ದೇಗುಲ‌ ಬಳಿ‌ ಉದ್ವಿಗ್ನ ಸ್ಥಿತಿ

Share
1 Min Read
SHARE

newsics.com

ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಪಶ್ಚಿಮ ಭಾಗದಲ್ಲಿರುವ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದ್ದರಿಂದ ದೇವಾಲಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಬುಧವಾರ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕು ಧಾರಿಗಳು ಓಮ್ನಿ ಕಾರಿನಲ್ಲಿ ಬಂದು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಮನೆಯಲ್ಲಿದ್ದ ನಾಯಿ ಮರಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, 32 ಗ್ರಾಂ ಚಿನ್ನ, ದಾಖಲೆ ಪತ್ರ, ಹಣಗಳನ್ನೆಲ್ಲ ಮುಸುಧಾರಿಗಳು ದೋಚಿದ್ದಾರೆ ಎಂದು ದೂರಲಾಗಿದೆ.
ಘಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪುತ್ತೂರು ನಗರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ. ದರೋಡೆ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡ ನಡೆದಿತ್ತು.

ಪೊಲೀಸ್ ಠಾಣೆಗೆ ಆಗಮಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಯಾವುದೇ ಸೂಚನೆ ನೀಡದೇ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದವರ ಮೇಲೆ ಕೇಸ್ ಹಾಕುವಂತೆ ಒತ್ತಾಯಿಸಿದರು.

ಕೊನೇ ಕ್ಷಣದಲ್ಲಿ ಪುತ್ತೂರು ನಗರಠಾಣಾ ಪೊಲೀಸರು ಪುತ್ತೂರು ಮಹಾಲಿಂಗೇಶ್ವರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಟ್ರಸ್ಟಿ ವಿನಯ ಸುವರ್ಣ ಮತ್ತು ಇತರರ ಮೇಲೆ ಕೇಸ್ ದಾಖಲಿಸಿದ್ದಾರೆ‌.
ದೇವಸ್ಥಾನದ ಅಭಿವೃದ್ಧಿಗಾಗಿ ದೇವಸ್ಥಾನದ ಜಮೀನಿನಲ್ಲಿ ಇದ್ದ ಎಂಟು ಮನೆಗಳ ತೆರವಿಗೆ ಸೂಚಿಸಲಾಗಿತ್ತು. ಈ ಪೈಕಿ ಆರು ಮನೆಗಳನ್ನು ಬಿಟ್ಟುಕೊಟ್ಟಿದ್ದರೆ, ಸ್ಥಳೀಯ ನ್ಯಾಯವಾದಿ ಹಾಗೂ ಬಿಜೆಪಿ ಮುಖಂಡರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವೇಳೆ ನ್ಯಾಯವಾದಿ ಮನೆ ಮೇಲೆ ಫೆ.2ರಂದು ಮರ ಬಿದ್ದಿತ್ತು. ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಜತೆಗೆ ಮಂಗಳವಾರ ಮಾತುಕತೆ ನಿಗದಿಯಾಗಿದ್ದರೂ ಅವರು ತೆರವಿಗೆ ಕಾಲಾವಕಾಶ ಕೋರಿದ್ದರು ಎನ್ನಲಾಗಿದೆ.

ಆದರೆ ಮಂಗಳವಾರ ಮಧ್ಯರಾತ್ರಿ ರಾಜೇಶ್ ಬನ್ನೂರು ಸುಪರ್ದಿಯಲ್ಲಿದ್ದ ಮನೆಯನ್ನು ಜೆಸಿಬಿ ಬಳಸಿ ನೆಲಸಮ ಮಾಡಲಾಗಿದೆ. ಆದರೆ ಇದನ್ನು ಮಾಡಿದ್ದು ಯಾರು ಎಂಬುದು ಈವರೆಗೂ ಖಚಿತವಾಗಿಲ್ಲ.

MUDA case ನಿವೇಶನಗಳ ವಹಿವಾಟಿನಲ್ಲಿ ಅಕ್ರಮ ಹಣ ಶಂಕೆ: ಇಡಿಯಿಂದ 812 ಮುಡಾ ಸೈಟ್ ಜಪ್ತಿ

Pareeksha pe charcha ಪರೀಕ್ಷಾ ಪೇ ಚರ್ಚಾಗೆ ಹೊಸ ರೂಪ: ಈ‌ ಬಾರಿ ಮೋದಿ‌ ಜತೆ ಸದ್ಗುರು, ದೀಪಿಕಾ ಸೇರಿ 7 ಸೆಲೆಬ್ರಿಟಿಗಳು‌ ಭಾಗಿ

TAGGED:tense near the Puttur Mahalingeshwara Temple
Share This Article
Facebook Twitter Copy Link Print
Previous Article TODAY’S ALMANAC ಶುಭ ದಿನ, ಮಾಘ ಮಾಸ ಶುಕ್ಲ ಪಕ್ಷ ನವಮಿ, 06-02-2025, ಗುರುವಾರ, ಮಧ್ವ ನವಮಿ
Next Article KSRTC ಬಸ್ ಪಲ್ಟಿ: 60ಕ್ಕೂ ಹೆಚ್ಚು‌ ಪ್ರಯಾಣಿಕರಿಗೆ ಗಾಯ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?