newsics.com
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಭವಿಷ್ಯ ನಾಳೆ (ಫೆ.7) ನಿರ್ಧಾರವಾಗಲಿದೆ.
ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕೋ ಬೇಡವೋ ಎನ್ನುವ ಬಗ್ಗೆ ಕಾಯ್ದಿರಿಸಿರುವ ಆದೇಶವನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.
ಮತ್ತೊಂದೆಡೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ನಾಳೆ(ಫೆ.7) ಹಾಲಿ, ಮಾಜಿ ಸಿಎಂಗಳಿಗೆ ನಿರ್ಣಯಕ ದಿನವಾಗಿದೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ನಾಳೆ(ಫೆ.7) ಆದೇಶ ಪ್ರಕಟಿಸಲಿದೆ.
ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ನಾಳೆ (ಫೆ.7) ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಕೋರ್ಟ್ ತೀರ್ಪು ಏನು ನೀಡತ್ತೋ ಎನ್ನುವ ಅತಂಕ ಸಿದ್ದರಾಮಯ್ಯನವರಿಗೆ ಶುರುವಾಗಿದೆ.
ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲರ ಮಣೀಂದ್ರ್ ಸಿಂಗ್ ಅವರು ವಾದ ಮಂಡಿಸಿದ್ದರು.
ಇನ್ನು, ಬೆಂಗಳೂರಿನಲ್ಲಿ ನಾಳೆ (ಫೆ.7) ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ತೀರ್ಪು ನೀಡಲಿದೆ.
Shiradi Sai Mandir ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರಸಾದದೂಟಕ್ಕೆ ಕೂಪನ್: ನಾಳೆಯಿಂದಲೇ ಜಾರಿ
Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ