Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು
ಕರ್ನಾಟಕಪ್ರಮುಖ

ಮುಡಾ ಹಗರಣ: ಸಿಬಿಐ ತನಿಖೆ ಅಗತ್ಯವಿಲ್ಲವೆಂದ ಹೈಕೋರ್ಟ್, ಸಿಎಂ ನಿಟ್ಟುಸಿರು

Share
2 Min Read
SHARE

newsics.com

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು‌ ಲೋಕಾಯುಕ್ತವೇ ಮುಂದುವರಿಸಲಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸಧ್ಯ ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.

ಮುಡಾ ಸಿಎಂ ಸಿದ್ದರಾಮಯ್ಯ ಪತ್ನಿಗೆ ಕಾನೂನುಬಾಹಿರವಾಗಿ ಕೊಟ್ಟಿದ್ದ 14 ಸೈಟ್‌ಗಳ ತನಿಖೆಯನ್ನ ಸಿಬಿಐಗೆ ವಹಿಸಬೇಕೇ ಬೇಡವೇ ಎನ್ನುವ ಬಗ್ಗೆ ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಪ್ರಾಸಿಕ್ಯೂಷನ್‌ ಮತ್ತು ಪೊಲೀಸ್‌ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ 2024ರ ಸೆ.24ರಂದು ಆದೇಶಿಸಿತ್ತು. ಈ ತೀರ್ಪಿನಲ್ಲಿ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ಹೇಳಿತ್ತು.ಇದೀಗ ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.

ಮೈಸೂರಿನ ದೇವನೂರು 3ನೇ ಹಂತದ ಬಡಾವಣೆ ಅಭಿವೃದ್ಧಿಗೆ ಮುಡಾ ವಶಪಡಿಸಿಕೊಂಡಿದೆ ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್‌ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್‌-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ಸೆ.24ರಂದು ತಿರಸ್ಕರಿಸಿತ್ತು. ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಎಫ್‌ಐಆರ್‌ ದಾಖಲಾದ ದಿನವೇ ಅಂದರೆ ಸೆ.27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿದ್ದ ನ್ಯಾ.ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು.

TAGGED:Muda scam: The High Court says there is no need for CBI probe
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ದಶಮಿ, 07-02-2025, ಶುಕ್ರವಾರ
Next Article ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್‌ವೈಗೆ ಹೈಕೋರ್ಟ್ ಜಾಮೀನು, ಬಂಧನ ಭೀತಿಯಿಂದ ಪಾರು

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?