newsics.com
ನವದೆಹಲಿ : ದೆಹಲಿಯಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದ್ದು, 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ 30 ನಿಮಿಷಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 30 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದೆ.
ದೆಹಲಿ ವಿಧಾನಸಭಾ ಚುನಾವಣೆ 2025 ರ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದ್ದು,ಬಿಜೆಪಿ 38. ಆಪ್ 25, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಸದ್ಯದ ಮಾಹಿತಿ ಪ್ರಕಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ. ಬಿಜೆಪಿ ಮ್ಯಾಜಿಕ್ ಸಂಖ್ಯೆ ದಾಟಿದ್ದು, ಮುನ್ನಡೆ ಕಾಯ್ದುಕೊಂಡಿದೆ.ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದಾರೆ.
ಪ್ರಮುಖ ಸ್ಪರ್ಧಿಗಳಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜಧಾನಿಯಲ್ಲಿ ಸರ್ಕಾರ ರಚಿಸುವ ಭರವಸೆಯಲ್ಲಿವೆ. ದೆಹಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಫೆಬ್ರವರಿ 5 ರಂದು ಮತದಾನ ನಡೆಯಿತು.