newsics.com
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಗಾಂಜಾ ಕೇಸ್‌ನಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಾಡಹಗಲೇ 4 ಲಕ್ಷ ರೂ. ಸುಲಿಗೆ ಮಾಡಿದ್ದ ಸಿಸಿಬಿ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹಾಗೂ ಹೆಡ್ ಕಾನ್ಸ್‌ಟೆಬಲ್ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಸಿಸಿಬಿ ವಿಶೇಷದಳ ವಿಭಾಗದ ಎಎಸ್ಐ ಸಗೀರ್ ಅಹ್ಮದ್, ಅಮಾನತುಗೊಂಡ ಹೆಡ್ ಕಾನ್‌ಸ್ಟೆಬಲ್ ಯತೀಶ್ ಮತ್ತು ಆಟೋ ಚಾಲಕ ಸಮೀರ್ ಎಂದು ಗುರುತಿಸಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ ನಾಗಾರ್ಜುನ ಗಣೇಶ್ ಎಂಬವರು ನೀಡಿದ ದೂರಿನ ಮೇರೆಗೆ ಸುಲಿಗೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆಟೋ ಚಾಲಕ ಸಮೀರ್ ಪೊಲೀಸ್ ಮಾಹಿತಿದಾರನಾಗಿದ್ದು, ಉದ್ಯಮಿ ದೊಡ್ಡ ಮೊತ್ತದ ಹಣವನ್ನು ಸಾಗಿಸುತ್ತಿರುವ ಬಗ್ಗೆ ಬಂಧನಕ್ಕೊಳಗಾಗಿರುವ ಸಿಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಪ್ರಕರಣ ಸಂಬಂಧ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Darshan Birthday: ಇದ್ದಕ್ಕಿದ್ದಂತೆ ಕ್ಯಾಮರಾ ಮುಂದೆ ಬಂದು ದರ್ಶನ್ ಹೇಳಿದ್ದೇನು?