newsics.com
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಸೋಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ. ನವದೆಹಲಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದರೆ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಇನ್ನು ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.
ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ.