newsics.com
ಜಮ್ಮು ಕಾಶ್ಮೀರ: ರೆಸ್ಟೋರೆಂಟ್ ನಲ್ಲಿ ಬೆಂಕಿ ಅನಾಹುತ ಆಗಿದ್ದು, ಸುತ್ತಮುತ್ತಲಿನ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಜಮ್ಮು ಕಾಶ್ಮೀರದ ಸೋನಾಮಾರ್ಗದಲ್ಲಿ ನಡೆದಿದೆ.
ಬೆಂಕಿಯ ತೀವ್ರತೆಗೆ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ . ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಅಕ್ಕಪಕ್ಕದ ಅಂಗಡಿಗೂ ವ್ಯಾಪಿಸಿತು. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.