newsics.com
ಬೆಂಗಳೂರು: ಕ್ರೇಜಿ ಕ್ವೀನ್ ರಕ್ಷಿತಾ ಸಹೋದರ ರಾಣಾ ಮದುವೆ ಆರತಕ್ಷತೆ ಫೆ.8ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಜರುಗಿದೆ. ಈ ಸಂಭ್ರಮದಲ್ಲಿ ಮೋಹಕತಾರೆ ರಮ್ಯಾ ಸ್ಟೈಲೀಶ್ ಆಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.
ರಾಣಾ ಹಾಗೂ ಫ್ಯಾಷನ್ ಡಿಸೈನರ್ ರಕ್ಷಿತಾಗೆ ಶುಭ ಕೋರಲು ರಮ್ಯಾ ಕೂಡ ಆರತಕ್ಷತೆಗೆ ಆಗಮಿಸಿದ್ದರು. ಒಂದು ಕ್ಷಣ ಮೋಹಕತಾರೆ ರಮ್ಯಾ ಎಂಟ್ರಿ ನೋಡಿ ಅನೇಕರು ದಂಗಾದರು.
ರಕ್ಷಿತಾ ಸಹೋದರನ ಆರತಕ್ಷತೆಯಲ್ಲಿ ಸ್ಲೀವ್ಲೆಸ್ ಬ್ಲೌಸ್ಗೆ ಕಪ್ಪು ಬಣ್ಣದ ಸೀರೆಯುಟ್ಟು ರಮ್ಯಾ ಮಿರ ಮಿರ ಅಂತ ಮಿಂಚಿದ್ದಾರೆ. ವಯಸ್ಸು 42 ವರ್ಷವಾಗಿದ್ರೂ ಬಳುಕುವ ಬಳ್ಳಿಯಂತೆ ರಮ್ಯಾ ಕಂಗೊಳಿಸಿದ್ದಾರೆ. ಅವರ ಫಿಟ್ನೆಸ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿತ್ರರಂಗಕ್ಕೆ ಬಂದು ಹಲವು ವರ್ಷಗಳು ಕಳೆದಿದ್ರೂ ಕೂಡ ಇಂದಿಗೂ ರಕ್ಷಿತಾ ಹಾಗೂ ರಮ್ಯಾ ನಡುವಿನ ಅದೆಷ್ಟು ಚೆನ್ನಾಗಿದೇ ಎಂಬುದಕ್ಕೆ ರಾಣಾ ಆರತಕ್ಷತೆಯಲ್ಲಿ ಇಬ್ಬರೂ ಇದ್ದ ರೀತಿಯೇ ಸಾಕ್ಷಿಯಾಗಿದೆ. ರಕ್ಷಿತಾರನ್ನು ನೋಡ್ತಿದ್ದಂತೆ ರಮ್ಯಾ ತಬ್ಬಿಕೊಂಡಿದ್ದಾರೆ.