newsics.com
ಹಾಸನ: ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಡಿಜಿಪಿ, ಎಸ್‌ಪಿ, ಸಿಎಂ ಹಾಗೂ ಗೃಹ ಸಚಿವರಿಗೆ ದೂರು ಸಲ್ಲಿಕೆಯಾಗಿದೆ. ಮತ್ತೊಂದೆಡೆ ದೂರು ಸಲ್ಲಿಸಿದ ವ್ಯಕ್ತಿಯ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ.
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಅವರ ವಿರುದ್ದ ಇದೀಗ ಎಫ್‌ಐಆರ್ ದಾಖಲಾಗಿದೆ.
ಆಯುರ್ವೇದ ಮಸಾಜ್ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ