newsics.com
ಭಾರತದ ಖ್ಯಾತ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ತಮ್ಮ ಹೇಳಿಕೆಯಿಂದ ವಿವಾದಕ್ಕೆ ಗುರಿಯಾಗಿದ್ದಾರೆ.
ಬೀರ್‌ಬೈಸೆಪ್ಸ್ ಎಂದೂ ಕರೆಯಲ್ಪಡುವ ರಣವೀರ್ ಅಲ್ಲಾಬಾಡಿಯಾ, ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ಈ ವೇಳೆ ಸ್ಪರ್ಧಿಯೊಬ್ಬರಿಗೆ, ನಿಮ್ಮ ಪೋಷಕರು ಜೀವನದುದ್ದಕ್ಕೂ ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರೊಂದಿಗೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ ಎಂದು ಪ್ರಶ್ನಿಸಿ ವಿವಾದ ಸೃಷ್ಟಿಸಿದ್ದಾರೆ.
ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ರಣವೀರ್ ಅಲ್ಲಾಬಾದಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಕ್ಷಮೆ ಕೇಳಿದ್ದಾರೆ. ಆ ರೀತಿ ನಾನು ಹೇಳಬಾರದಿತ್ತು. ನನ್ನ ಹೇಳಿಕೆ ತಪ್ಪಾಗಿದೆ. ಆ ಭಾಗವನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದೇನೆ. ನಿಮ್ಮ ಭಾವನೆಗಳಿಗೆ ನೋವಾಗಿದೆ. ಇನ್ನು ಮುಂದೆ ಈ ರೀತಿಯ ತಪ್ಪು ನಡೆಯದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಸದ್ಯ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಯೂಟ್ಯೂಬ್‌ನಲ್ಲಿ ಸುಮಾರು ಒಂದುಟಿಗೂ ಹೆಚ್ಚು ಚಂದಾದಾರರನ್ನು ಹೊಂದಿರುವ ಅವರಿಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ.