newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಬಿಟ್ಟು ಬಿಡದೇ ಕಾಡುತ್ತಿರುವ ಮುಡಾ ಹಗರಣಕ್ಕೆ ಮತ್ತೊಂದು ಮೆಗಾ ತಿರುವು ಸಿಕ್ಕಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ 10 ದಿನಗಳ ಕಾಲ ಸಿಎಂ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಇಬ್ಬರಿಗೂ ತಾತ್ಕಾಲಿಕ ರಿಲೀಫ್ ನೀಡಿದೆ.
ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ ಆರೋಪದಲ್ಲಿ ಇ.ಡಿ (ಜಾರಿ ನಿರ್ದೇಶನಾಲಯ) ಸಚಿವ ಬೈರತಿ ಸುರೇಶ್ ಸೇರಿ ಇಬ್ಬರಿಗೂ ಸಮನ್ಸ್ ಜಾರಿ ಮಾಡಿದೆ. ಇ.ಡಿ ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಫೆಬ್ರವರಿ 20ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದೆ.
ಇ.ಡಿ ವಿಚಾರಣೆಯ ಹಾಜರಾತಿಗೆ ವಿನಾಯಿತಿ ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಇದೇ ವೇಳೆ ಇಬ್ಬರಿಗೂ ನೀಡಿದ್ದ ಸಮನ್ಸ್ಗೆ ಕೂಡ ಫೆಬ್ರವರಿ 20ರವರೆಗೆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.