newsics.com
ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿದ್ದಕ್ಕೆ 25 ಸಾವಿರ ದಂಡ ವಿಧಿಸಿದ ಘಟನೆ ಬಂಡೀಪುರದಲ್ಲಿ ನಡೆದಿದೆ.
ಗುಂಡ್ಲುಪೇಟೆಯ ಶಾಹುಲ್ ಹಮೀದ್, ಇತ್ತೀಚಿಗಷ್ಟೇ ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಮುಂದೆ ಫೋಟೋಗಾಗಿ ಹುಚ್ಚಾಟ ಮೆರೆದು, ಕಾಡಾನೆ ಮುಂದೆ ಕಿರುಚಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಹುಚ್ಚಾಟ ಮೆರೆದ ಯುವಕನನ್ನು ಬಂಧಿಸಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದರು. ವೀಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆಯು 25 ಸಾವಿರ ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಮತ್ತೆ ಇಂತಹ ಘಟನೆ ಪುನರಾವರ್ತನೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ