Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್
ಕರ್ನಾಟಕಮನರಂಜನೆ

‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್

Share
1 Min Read
Daali Dhananjay Acting In Nadaprabhu Kempegowda
SHARE

Newsics.com

ಬೆಂಗಳೂರು : ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ. ಕೆಂಪೇಗೌಡರ ಕುರಿತಾಗಿ ಸಿನಿಮಾ ಮಾಡುವ ಪ್ರಯತ್ನ ಈ ಹಿಂದೆಯೂ ಆಗಿದ್ದು, ಆ ಸಿನಿಮಾದಲ್ಲಿ ದರ್ಶನ್ ನಟಿಸಬೇಕಾ? ಸುದೀಪ್ ನಟಿಸಬೇಕಾ? ಎಂಬ ಚರ್ಚೆಗಳು ಸಹ ನಡೆದಿದ್ದವು, ಆದರೆ ಈಗ ಡಾಲಿ ಧನಂಜಯ್ ಕೆಂಪೇಗೌಡರ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಪೋಸ್ಟರ್ ಬಿಡುಗಡೆ ಆಗಿದ್ದು, ಗಿರಿಜಾ ಮೀಸೆ, ತಿಲಕ ಇಟ್ಟು, ಧನಂಜಯ್ ಖಡಕ್ ಆಗಿ ಕಾಣುತ್ತಿದ್ದಾರೆ.

ಈ ಸಿನಿಮಾವನ್ನು ಹಿರಿಯ, ಅನುಭವಿ ನಿರ್ದೇಶಕ ಟಿಎಸ್ ನಾಗಾಭರಣ ನಿರ್ದೇಶನ ಮಾಡಲಿದ್ದಾರೆ. ಸಿನಿಮಾ, ಸಾಹಿತ್ಯ ಎರಡರಲ್ಲೂ ಉತ್ತಮ ಕೃಷಿ ಹೊಂದಿರುವ ನಾಗಾಭರಣ ಕೆಂಪೇಗೌಡರ ಕತೆಯನ್ನು ಪರಿಣಾಮಕಾರಿಯಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಸಿನಿಮಾ ಪ್ರೇಮಿಗಳದ್ದು. ಸಿನಿಮಾಕ್ಕೆ ಎಂಎನ್ ಶಿವರುದ್ರಪ್ಪ, ಶುಭಂ ಗುಂಡಾಲ ನಿರ್ಮಾಣ ಮಾಡುತ್ತಿದ್ದಾರೆ.

ನಾಗಾಭರಣ ಅವರಿಗೆ ಐತಿಹಾಸಿಕ ಸಿನಿಮಾಗಳು ಹೊಸವಲ್ಲ. ಕೆಲ ಅತ್ಯುತ್ತಮ ಪೀರಿಯಡ್ ಸಿನಿಮಾಗಳನ್ನು ನಾಗಾಭರಣ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ‘ಸಂತ ಶಿಷುನಾಳ ಶರೀಫ, ‘ನೀಲ’, ‘ಕಲ್ಲರಳಿ ಹೂವಾಗಿ’ ಇನ್ನೂ ಕೆಲವು ಪೀರಿಯಡ್ ಸಿನಿಮಾಗಳನ್ನು ನಾಗಾಭರಣ ನಿರ್ದೇಶಿಸಿದ್ದಾರೆ. ಈಗ ಕೆಂಪೇಗೌಡರ ಕತೆಯನ್ನು ಸಿನಿಮಾ ಮಾಡಲಿದ್ದಾರೆ.

ಈ ಹಿಂದೆ ದಿನೇಶ್ ಬಾಬು ಅವರು ನಾಡಪ್ರಭು ಕೆಂಪೇಗೌಡರ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಸಿನಿಮಾ ಟೈಟಲ್ ಘೋಷಿಸಿದ್ದರು. ಆದರೆ ಅದಕ್ಕೆ ನಾಗಾಭರಣ ನ್ಯಾಯಾಲಯದ ಮೂಲಕ ತಡೆ ತಂದರು. ತಾವು ಸಿನಿಮಾ ಕೆಂಪೇಗೌಡರ ಕುರಿತಾದ ಸಿನಿಮಾ ಮಾಡುವ ಪ್ರಯತ್ನದಲ್ಲಿ, ಅದಕ್ಕಾಗಿ ಟೈಟಲ್ ರಿಜಿಸ್ಟ್ರೇಷನ್ ಸಹ ಮಾಡಿಸಿದ್ದರು. ಹಾಗಾಗಿ ದಿನೇಶ್​ರ ಸಿನಿಮಾದ ವಿರುದ್ಧ ಅರ್ಜಿ ಸಲ್ಲಿಸಿ ಸ್ಟೇ ತಂದಿದ್ದರು.

ಈಗ ಬರಲಿರುವ ‘ನಾಡಪ್ರಭು ಕೆಂಪೇಗೌಡ’ ಸಿನಿಮಾಕ್ಕೆ ನಾಗಾಭರಣ ಅವರೇ ಚಿತ್ರಕತೆ ಬರೆದಿದ್ದು, ಸಾಹಿತಿ ಪ್ರತಿಭಾ ನಂದಕುಮಾರ್ ಅವರು ಬರವಣಿಗೆಯಲ್ಲಿ ಸಹಾಯ ಮಾಡಲಿದ್ದಾರೆ. ನಾಗಾಭರಣ ಅವರ ಪುತ್ರ ನಿರ್ದೇಶಕ ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ಸಂಗೀತವನ್ನು ವಾಸುಕಿ ವೈಭವ್ ನೀಡಲಿದ್ದಾರೆ. ಶಶಿಧರ ಅಡಪ ಅವರು ಸಿನಿಮಾದ ಸೆಟ್ ನಿರ್ಮಾಣ ಇನ್ನಿತರೆಗಳನ್ನು ನೋಡಿಕೊಳ್ಳಲಿದ್ದಾರೆ.

ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ
TAGGED:Daali Dhananjay Acting In Nadaprabhu Kempegowda
Share This Article
Facebook Twitter Copy Link Print
Previous Article Renowned writer Kamala Hampana passes away ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ
Next Article Gautam Gambhir addresses rumors about becoming India's next cricket coach, emphasizing a team-first coaching philosophy ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?