newsics.com
ನವದೆಹಲಿ : ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ ಎಸ್‌ಸಿ ಮತ್ತು ಎಸ್‌ಟಿ ನ್ಯಾಯಾಲಯದಲ್ಲಿ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಧೀಶರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದರು.
ವಿಚಾರಣೆಯ ಸಮಯದಲ್ಲಿ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿತಸ್ಥನೆಂದು ಸಾಬೀತಾಯಿತು. ಜಿಲ್ಲಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಆದರೆ, ತೀರ್ಪನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಆರೋಪಿ ಕೋಪದ ಭರದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆ ನಡೆಸಿದ.
ಜೀವಾವಧಿ ಶಿಕ್ಷೆ ವಿಧಿಸಿ ಅಂತಿಮ ತೀರ್ಪು ನೀಡಲಾಯಿತು. ಆದರೆ, ಆರೋಪಿಯು ನ್ಯಾಯಾಲಯದಲ್ಲಿ ಪ್ರತಿಭಟನೆ ನಡೆಸಿ, ತಾನು ನಿರಪರಾಧಿ ಎಂದು ಹೇಳಿಕೊಂಡು ನ್ಯಾಯಾಧೀಶರ ಜೊತೆ ಮಾತನಾಡಲು ಅವಕಾಶ ನೀಡುವಂತೆ ಒತ್ತಾಯಿಸಿದನು. ಈ ಸಂದರ್ಭದಲ್ಲಿ, ನ್ಯಾಯಾಧೀಶರ ಕಡೆಗೆ ಓಡಿ ಬಂದ ಆರೋಪಿ, ಇದ್ದಕ್ಕಿದ್ದಂತೆ ನ್ಯಾಯಾಧೀಶರ ಮೇಲೆ ತನ್ನ ಶೂ ಎಸೆದಿದ್ದಾನೆ. ಈ ಆಘಾತಕಾರಿ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಇದರಿಂದಾಗಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಘಟನೆಯಿಂದ ಆಘಾತಕ್ಕೊಳಗಾದ ನ್ಯಾಯಾಲಯದಲ್ಲಿದ್ದ ವಕೀಲರು ಅಪರಾಧಿಯನ್ನು ಹಿಡಿದು, ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದರು. ಈ ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.