newsics.com
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.
ರಾಜ್ಯದಲ್ಲಿ 1951ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಫೆ.9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ಹಾಗೂ ವಿಧಾನಸಭೆ ಅಧಿವೇಶನ ಕೆರಯದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ರಾಜ್ಯಪಾಲರ ವರದಿ ಸ್ವೀಕರಿಸಿದ ಬಳಿಕ, ನನಗೆ ಬಂದ ವರದಿ ಮತ್ತು ಇತರ ಮಾಹಿತಿಯನ್ನಾಧರಿಸಿ ಭಾರತ ಸಂವಿಧಾನದ ನಿಬಂಧನೆಗಳ ಅನ್ವಯ ರಾಷ್ಟ್ರಪತಿ ಆಳ್ವಿಕೆಯನ್ನು ಅನುಷ್ಠಾನಕ್ಕೆ ತರಲಾಗಿದೆ.