Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Mumbai attack accused Rana ಮುಂಬೈ ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಗ್ರೀನ್ ಸಿಗ್ನಲ್
ವಿದೇಶ

Mumbai attack accused Rana ಮುಂಬೈ ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಗ್ರೀನ್ ಸಿಗ್ನಲ್

Share
1 Min Read
SHARE

newsics.com

ವಾಷಿಂಗ್ಟನ್‌: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ.

ಪಾಕಿಸ್ತಾನ ಮೂಲದ ಕೆನಡಾ ಪ್ರಜೆಯಾಗಿರುವ ರಾಣಾ, ಸದ್ಯ ಲಾಸ್‌ ಏಂಜಲೀಸ್‌ನ ಮೆಟ್ರೊಪಾಲಿಟನ್‌ ಬಂಧನ ಕೇಂದ್ರದಲ್ಲಿದ್ದಾನೆ. ಈತ, ಮುಂಬೈ ಮೇಲೆ 2008ರ ನವೆಂಬರ್‌ 26ರಂದು ನಡೆದ (26/11) ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನ-ಅಮೆರಿಕನ್‌ ಉಗ್ರ ಡೇವಿಡ್‌ ಕೋಲ್ಮನ್‌ ಹೆಡ್ಲಿಯೊಂದಿಗೆ ನಂಟು ಹೊಂದಿದ್ದಾನೆ ಎನ್ನಲಾಗಿದೆ.

ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಟ್ರಂಪ್‌, ‘ಮುಂಬೈ ಮೇಲಿನ ಭಯಾನಕ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ, ಜಗತ್ತಿನ ಅತಿ ದುಷ್ಟರಲ್ಲಿ ಒಬ್ಬನನ್ನು (ತಹವ್ವೂರ್‌ ರಾಣಾನನ್ನು) ಭಾರತಕ್ಕೆ ಗಡಿಪಾರು ಮಾಡಲು ನನ್ನ ಆಡಳಿತವು ಅನುಮೋದನೆ ನೀಡಿದೆ ಎಂದು ಘೋಷಿಸುತ್ತಿದ್ದೇನೆ. ಹಾಗಾಗಿ, ವಿಚಾರಣೆ ಎದುರಿಸಲು ಆತ ಭಾರತಕ್ಕೆ ವಾಪಸ್‌ ಆಗಲಿದ್ದಾನೆ’ ಎಂದು ಹೇಳಿದ್ದಾರೆ.

ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಅರಬ್ಬೀ ಸಮುದ್ರದ ಮೂಲಕ 2008ರ ನವೆಂಬರ್ 26ರಂದು ರಾತ್ರಿ ಮುಂಬೈ ನಗರವನ್ನು ಪ್ರವೇಶಿಸಿದ್ದರು. ನಗರದ ರೈಲ್ವೆ ನಿಲ್ದಾಣ, ಎರಡು ಐಷಾರಾಮಿ ಹೋಟೆಲ್‌ಗಳು ಹಾಗೂ ಯಹೂದಿ ಕೇಂದ್ರದ ಮೇಲೆ ಸಂಘಟಿತ ದಾಳಿ ನಡೆಸಿ ದೇಶದಾದ್ಯಂತ ತಲ್ಲಣ ಸೃಷ್ಟಿಸಿದ್ದರು. ಏಕಾಏಕಿ ನಡೆದ ಗುಂಡಿನಲ್ಲಿ ದಾಳಿಯಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ 166 ಜನರು ಮೃತಪಟ್ಟು 300 ಜನರು ಗಾಯಗೊಂಡಿದ್ದರು.

ದಾಳಿಯಲ್ಲಿ ಭಾಗಿಯಾಗಿದ್ದ 10 ಬಂದೂಕುಧಾರಿಗಳ ಪೈಕಿ 9 ಮಂದಿ ಛತ್ರಪತಿ ಶಿವಾಜಿ ಟರ್ಮಿನಲ್ ರೈಲ್ವೇ ನಿಲ್ದಾಣದಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತಿ ದಾಳಿ ವೇಳೆ ಹತ್ಯೆಯಾಗಿದ್ದರು. ಬದುಕುಳಿದಿದ್ದ ಒಬ್ಬ ಉಗ್ರ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌ಗೆ 2010ರಲ್ಲಿ ಮರಣದಂಡನೆ ವಿಧಿಸಲಾಗಿತ್ತು. ಆತನನ್ನು, 2012ರಲ್ಲಿ ಪುಣೆಯಲ್ಲಿ ಗಲ್ಲಿಗೇರಿಸಲಾಯಿತು.

ದಾಳಿ ಕುರಿತ ವಿಚಾರಣೆ ಸಲುವಾಗಿ ಭಾರತೀಯ ತನಿಖಾ ಸಂಸ್ಥೆಗಳು, ರಾಣಾ ಹಸ್ತಾಂತರವನ್ನು ಎದುರು ನೋಡುತ್ತಿವೆ.

TAGGED:America gives green signal to extradite Mumbai attack accused Rana to India
Share This Article
Facebook Twitter Copy Link Print
Previous Article Viral video ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ
Next Article Bengaluru Traffic Jam: ಗುಡ್‌ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!

Popular Posts

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

You Might Also Like

ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read
ದೇಶಪ್ರಮುಖವಿದೇಶ

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?