newsics.com
ವಿಜಯಪುರ: ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಅವರ ಹತ್ಯೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಬೇಧಿಸಿದ್ದಾರೆ. ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ವಿಜಯಪುರದಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಎ1 ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ಮಾಡಲಾಗಿತ್ತು. ಆಟೋದಲ್ಲಿ ಬಂದಿದ್ದ ನಾಲ್ಕೈದು ಮಂದಿ, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಮತ್ತು ಗುಂಡು ಹಾರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಈ ಸಂದರ್ಭದಲ್ಲಿ ಎಡಗೈ ಕೂಡ ಕಟ್ ಆಗಿದ್ದು, ಗುಪ್ತಾಂಗವನ್ನೂ ಕತ್ತರಿಸಲಾಗಿದೆ ಎಂದು ಹೇಳಲಾಗಿದೆ.
ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿದ್ದಾರೆ.