newsics.com
ಒಬ್ಬರನ್ನು ಗಟ್ಟಿಯಾಗಿ ತಬ್ಬಿಕೊಳ್ಳುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮಗೆ ಅನೇಕ ಪ್ರಯೋಜನಗಳಿವೆ. ಮನುಷ್ಯರನ್ನು ಮಾತ್ರವಲ್ಲ ನಿಮ್ಮ ನೆಚ್ಚಿನ ಸಾಕುಪ್ರಾಣಿಗಳು, ದಿಂಬು ಅಥವಾ ಬೆಡ್ಶೀಟ್ಗಳನ್ನು ಅಪ್ಪಿಕೊಳ್ಳುವುದರಿಂದಲೂ ಸಹ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ.
ನಾವು ಪ್ರೀತಿಸುವ ವ್ಯಕ್ತಿಯನ್ನು ತಬ್ಬಿಕೊಳ್ಳುವುದರಿಂದ ದೇಹ ಮತ್ತು ಮನಸ್ಸಿಗೆ ಸಾಕಷ್ಟು ಪ್ರಯೋಜನಗಳಿವೆ ಎಂಬುದು ತಿಳಿದು ಬಂದಿದೆ. ಕೇವಲ 20 ಸೆಕೆಂಡುಗಳ ಕಾಲ ವ್ಯಕ್ತಿಯನ್ನು ಗಟ್ಟಿಯಾಗಿ ತಬ್ಬಿಕೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಎಂದು ಅಧ್ಯಯನಗಳಿಂದ ಸಾಬೀತಾಗಿದೆ.
ಅಪ್ಪುಗೆಗೆ ಯಾವುದೇ ರೀತಿಯ ಒತ್ತಡವನ್ನು ಕಡಿಮೆ ಮಾಡುವ ಶಕ್ತಿಯಿದೆ. ಇದರಿಂದ ನಮ್ಮ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಸಂತೋಷದ ಭಾವನೆ ಹೆಚ್ಚಾಗುತ್ತದೆ. ನೀವು ಖಿನ್ನತೆಯಿಂದ ಬಳಲುತ್ತಿದ್ದರೆ, ಮಲಬದ್ಧತೆ ಸಮಸ್ಯೆ ಹೊಂದಿದ್ದರೆ ಅಪ್ಪು
- ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ: ಇತ್ತೀಚಿನ ದಿನಗಳಲ್ಲಿ, ಕೆಲಸದ ಒತ್ತಡ, ಪ್ಯಾನಿಕ್ ಅಟ್ಯಾಕ್ ಮತ್ತು ಮನಸ್ಸಿನ ಶಾಂತಿ ಹಾಳಾಗುವುದು ಸ್ವಾಭಾವಿಕವಾಗಿದೆ. ಆದರೆ ಕೇವಲ 20 ಸೆಕೆಂಡುಗಳ ಕಾಲ ಪ್ರೀತಿ ಪಾತ್ರರಾದ ವ್ಯಕ್ತಿಯನ್ನು ತಬ್ಬಿಕೊಳ್ಳುವುದರಿಂದ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಹೇಳುತ್ತವೆ. ವ್ಯಕ್ತಿಯನ್ನು ಹಗ್ ಮಾಡುವಾಗ ಆಕ್ಸಿಟೋಸಿನ್ ಎಂಬ ಹಾರ್ಮೋನ್ ದೇಹದಲ್ಲಿ ಬಿಡುಗಡೆಯಾಗುತ್ತದೆ ಇದು ಮನಸ್ಸಿಗೆ ಶಾಂತಿ ನೀಡುವ ಮೂಲಕ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.
- ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ: ನಮ್ಮ ಸಂಗಾತಿ ಅಥವಾ ನಾವು ಇಷ್ಟಪಡುವ ವ್ಯಕ್ತಿಯನ್ನು ತಬ್ಬಿಕೊಳ್ಳುವುದು ನಮ್ಮ ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ ಹೃದಯದ ಆರೋಗ್ಯಕ್ಕೂ ಹಲವು ರೀತಿಯ ಪ್ರಯೋಜನವನ್ನು ನೀಡುತ್ತದೆ. ವೈಜ್ಞಾನಿಕ ಸಂಶೋಧನೆಯ ಪ್ರಕಾರ, ತಬ್ಬಿಕೊಳ್ಳುವುದು ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಸಂತೋಷವನ್ನು ಹೆಚ್ಚಿಸುವ ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ.
- ದೈಹಿಕ ನೋವಿನಿಂದ ಪರಿಹಾರ ನೀಡುತ್ತದೆ: ತಬ್ಬಿಕೊಳ್ಳುವುದು ಒಂದು ರೀತಿಯ ಭಾವನೆ ಮಾತ್ರವಲ್ಲದೆ ಇದು ನಮ್ಮ ದೇಹಕ್ಕೂ ಒಳ್ಳೆಯದು. ದೇಹದಲ್ಲಿರುವ ನೋವನ್ನು ಕಡಿಮೆ ಮಾಡುವ ಶಕ್ತಿ ಒಂದು ಅಪ್ಪುಗೆಗೆ ಇದೆ. ಈ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ಹಾರ್ಮೋನುಗಳು ಬಹಳ ಶಕ್ತಿಶಾಲಿಯಾಗಿದ್ದು, ಕೆಲವು ಚಿಕಿತ್ಸೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಸಂಶೋಧನೆಗಳು ಹೇಳುತ್ತವೆ.
- ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಉತ್ತರ ಕೆರೊಲಿನಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಒಂದು ಅಧ್ಯಯನದ ಪ್ರಕಾರ, ಒಂದು ಪ್ರೀತಿಯ ಅಪ್ಪುಗೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಮ್ಮ ಹೃದಯ ಆರೋಗ್ಯವಾಗಿರುತ್ತದೆ.