newsics.com
ಬೆಂಗಳೂರು : ಅಪರಿಚಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ಫೆಬ್ರವರಿ 13ರಂದು ನಡೆದಿರುವುದು ಈಗ ಬೆಳಕಿಗೆ ಬಂದಿದೆ.
ರೈಲು ನಿಲ್ದಾಣದಲ್ಲಿ ಓಡಾಡಿಕೊಂಡಿದ್ದ ಮಹಿಳೆಯನ್ನು ರಾತ್ರಿ ಅಪರಿಚಿತ ಯುವಕನೋರ್ವ ಕರೆದೊಯ್ದು ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹಾಸನ ನಗರದ ಬಿಎಂ ರಸ್ತೆಯ ರಾಜಘಟ್ಟಕ್ಕೆ ಹೋಗುವ ಮಾರ್ಗದಲ್ಲಿ ರೈಲ್ವೆ ಇಂಜಿನ್ ಸರ್ವೀಸ್ಗಾಗಿ ಹೊಸದಾಗಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಫೆಬ್ರವರಿ 12ರಂದು ಸಂಜೆ 6 ಗಂಟೆವರೆಗೂ ಕೂಡ ಕಾರ್ಮಿಕರು ಅಲ್ಲಿ ಕೆಲಸ ಮಾಡಿದ್ದಾರೆ. ನಂತರ ಮರುದಿನ ಬೆಳಿಗ್ಗೆ 7 ಗಂಟೆಗೆ ಕೆಲಸ ಮಾಡಲು ಕಾರ್ಮಿಕರು ಬಂದಾಗ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.