Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ನೊಂದ ಯುವಕರಿಬ್ಬರು ಸಾವಿಗೆ ಶರಣು!
ಕರ್ನಾಟಕಪ್ರಮುಖ

ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ನೊಂದ ಯುವಕರಿಬ್ಬರು ಸಾವಿಗೆ ಶರಣು!

Share
2 Min Read
SHARE

newsics.com

ಮಡಿಕೇರಿ/ಬೆಳಗಾವಿ: ಗ್ರಾಮೀಣ ಭಾಗದಲ್ಲಿರುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲವೆಂಬ ದೂರುಗಳು ಹೆಚ್ಚಾಗುತ್ತಿವೆ.

ಕೊಡಗಿನ ಯುವಕ ತನಗೆ ಹೆಣ್ಣು ಸಿಕ್ಕಿಲ್ಲವೆಂದು ಗುಂಡು ಹಾರಿಸಿಕೊಂಡು ಸಾವಿಗೀಡಾದರೆ, ಬೆಳಗಾವಿಯ ಯುವಕ ನಿಶ್ಚಿತಾರ್ಥ ಮಾಡಿಕೊಂಡ ಮದುವೆ ಸಂಬಂಧ ಮುರಿದುಬಿತ್ತು ಎಂದು ಸಾವಿಗೆ ಶರಣಾದ ಘಟನೆ ನಡೆದಿದೆ.

ಮದುವೆ ಆಗಿಲ್ಲವೆಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವುದು ಇಡೀ ಸಮಾಜವೇ ಮರುಕಪಡುವಂತಾಗಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕೆ.ಬೋಯಿಕೇರಿ ಗ್ರಾಮದ ಯುವಕ ಬಿ.ಪಿ. ಅನಿಲ್ ಕುಮಾರ್ @ ಸತೀಶ್ ತನ್ನ ಮನೆಯಲ್ಲೇ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾನೆ.

ಕುಡಿದ ಮತ್ತಿನಲ್ಲಿ ತನ್ನ ಗನ್‌ನಿಂದಲೇ ಶೂಟ್ ಮಾಡಿಕೊಂಡಿದ್ದಾನೆ. ಊರಿನಲ್ಲಿ ಆಚಾರಿ ಕೆಲಸ ಮಾಡಿಕೊಂಡಿದ್ದ ಅನಿಲ್‌ಗೆ ಯಾವಾಗ ಮದುವೆ ಮಾಡಿಕೊಳ್ತೀಯಾ ಎಂದು ಕೇಳುವವರ ಸಂಖ್ಯೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ತಾನು ಕುಡಿದಾಗಲೆಲ್ಲ ಮದುವೆ ಆಗುತ್ತಿಲ್ಲ, ಶೂಟ್ ಮಾಡಿಕೊಂಡು ಸಾಯುತ್ತೇನೆ ಎಂದು ಹೇಳುತ್ತಿದ್ದ. ಭಾನುವಾರ ತಡರಾತ್ರಿ ತನ್ನದೇ ಗನ್‌ನಿಂದ ಶೂಟ್ ಮಾಡಿಕೊಂಡಿದ್ದು, ಆತನ ಮುಖ ಛಿದ್ರ ಛಿದ್ರವಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

ತನಗೆ ಮದುವೆ ಆಗಲಿಲ್ಲ ಎಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಅನಿಲ್‌ಗೆ 43 ವರ್ಷ ವಯಸ್ಸಾಗಿದ್ದರೂ ಮದುವೆ ಆಗಿರಲಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಆತನ ಸಹೋದರನಿಗೂ ಮದುವೆಯಾಗಿರಲಿಲ್ಲ. ಹೀಗಾಗಿ ಕೆಲವು ದಿನಗಳ ಹಿಂದಷ್ಟೇ ಸ್ನೇಹಿತರ ಬಳಿ ಜೀವನ ಬೇಸರವಾಗಿದೆ ಎಂದೆಲ್ಲಾ ಹೇಳಿಕೊಂಡಿದ್ದ. ಏಕೆ ಎಂದು ಕೇಳಿದ್ದಕ್ಕೆ ಮದುವೆ ಆಗಿಲ್ಲ ಎಂದು ಹೇಳಿದ್ದನಂತೆ.
ಅನಿಲ್ ತಂದೆ 2010ರಲ್ಲಿ ತೀರಿಕೊಂಡಿದ್ದರು. ಇದಾದ ನಂತರ ಒಂದು ವರ್ಷದಲ್ಲಿ ಮದುವೆ ಮಾಡಿಕೊಳ್ಳಬೇಕು ಎಂದು ಎಷ್ಟೇ ಹೆಣ್ಣು ಹುಡುಕಿದರೂ ಹೆಣ್ಣು ಸಿಗಲೇ ಇಲ್ಲ. ಇದಾದ ಬಳಿಕವೂ ಹೆಣ್ಣು ಮಕ್ಕಳು ಈತನನ್ನಾಗಲೀ, ಈತನ ಅಣ್ಣನನ್ನಾಗಲೀ ಮದುವೆ ಮಾಡಿಕೊಳ್ಳಲು ಒಪ್ಪಿರಲಿಲ್ಲ ಎಂದು ಮೃತ ಅನಿಲ್‌ನ ಅಣ್ಣ ಉಮೇಶ್ ಹೇಳಿದ್ದಾನೆ. ಆದರೆ, ನನ್ನ ತಮ್ಮನಿಗೆ ಮದುವೆ ಆಗದೇ ಇರುವುದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಾಗಿದೆ. ಆದರೆ, ತನಿಖೆ ನಡೆಯದೆ ನಾವು ಯಾವ ನಿರ್ಧಾರವನ್ನು ಮಾಡಲಾಗಲ್ಲ. ತನಿಖೆ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದ್ದಾರೆ.

ಮದುವೆ ಮುರಿದಿದ್ದಕ್ಕೆ ಬಸವರಾಜ ಸಾವು:

ಬೆಳಗಾವಿ ತಾಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಬಸವರಾಜ ಸೋಮಪ್ಪ ಡೊಂಗರಗಾವಿ (28) ಎನ್ನುವ ಯುವಕ ತಾನು ಹೆಣ್ಣು ನೋಡಿ, ಮದುವೆ ಗೊತ್ತು ಮಾಡಿಕೊಂಡರೂ ಮುರಿದು ಬೀಳುತ್ತಿವೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳಲು ಹಲವಾರು ಸಂಬಂಧ ಹುಡುಕಿದ್ದರೂ, ಎಲ್ಲ ಸಂಬಂಧಗಳೂ ರದ್ದಾಗುತ್ತಿವೆ‌ ಎಂದು ಮನನೊಂದಿದ್ದ. ಭಾನುವಾರ ಇದೇ ದುಃಖದಲ್ಲಿ ಹೊಲದ ಬಳಿ ಹೋದ ಬಸವರಾಜ ಮರಕ್ಕೆ ನೇಣು ಬಿಗಿದುಕ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿಯ ಅನೈತಿಕ ಸಂಬಂಧ: 5 ವರ್ಷದ ಮಗಳನ್ನು ಕೊಂದು ಆತ್ಮ*ಹತ್ಯೆ ಮಾಡಿಕೊಂಡ ಗ್ರಾಪಂ ಅಧ್ಯಕ್ಷೆ

flying seagliders ಬರಲಿವೆ ಹಾರಬಲ್ಲ ಎಲೆಕ್ಟ್ರಿಕ್ ಸೀಗ್ಲೈಡರ್‌ಗಳು! ಕೋಲ್ಕತ್ತಾ- ಚೆನ್ನೈಗೆ ಪ್ರಯಾಣಕ್ಕೆ ಬರೀ 600 ರೂ.

unemployed tekki cry ದಯವಿಟ್ಟು ನನಗೊಂದು ಕೆಲಸ ಕೊಡಿ, ಸಂಬಳ ಬೇಡ: ನಿರುದ್ಯೋಗಿ ಟೆಕ್ಕಿಯ ಅಳಲು

TAGGED:two young men life ends himself because they did not get a girl to marry
Share This Article
Facebook Twitter Copy Link Print
Previous Article ಪತಿಯ ಅನೈತಿಕ ಸಂಬಂಧ: 5 ವರ್ಷದ ಮಗಳನ್ನು ಕೊಂದು ಆತ್ಮ*ಹತ್ಯೆ ಮಾಡಿಕೊಂಡ ಗ್ರಾಪಂ ಅಧ್ಯಕ್ಷೆ
Next Article ಒಂದೇ ಕುಟುಂಬದ ನಾಲ್ವರ ಸಾವು: ತಾಯಿ, ಪತ್ನಿ, ಮಗನನ್ನು ಕೊಲೆ ಮಾಡಿ ತಾನೂ ಸಾವಿಗೆ ಶರಣಾದ ಯುಜಮಾನ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?