newsics.com
ಆ್ಯಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯವಾಗಿ 50 ರನ್‌ಗಳ ಜಯ ಸಾಧಿಸಿತು.
ಇದು ಸೂಪರ್-8 ಸುತ್ತಿನಲ್ಲಿ ಟೀಂ ಇಂಡಿಯಾದ ಸತತ ಎರಡನೇ ಗೆಲುವು. ಇದಕ್ಕೂ ಮುನ್ನ ಟೀಂ ಇಂಡಿಯಾ ಅಫ್ಘಾನಿಸ್ತಾನವನ್ನು ಸೋಲಿಸಿತ್ತು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.
ಮೊದಲು ಬ್ಯಾಟ್ ಮಾಡಿದ ಭಾರತ ಐದು ವಿಕೆಟ್‌ಗೆ 196 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 146 ರನ್ ಗಳಿಸಲಷ್ಟೇ ಶಕ್ತವಾಯಿತು.
ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಮಾಡಿ ಬಾಂಗ್ಲಾದೇಶಕ್ಕೆ ಏಳನೇ ಹೊಡೆತ ನೀಡಿದರು. ರಿಶಾದ್ ಹುಸೇನ್ 10 ಎಸೆತಗಳಲ್ಲಿ 24 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಬಾಂಗ್ಲಾ ನಾಯಕ ನಜ್ಮುಲ್ ಹುಸೇನ್ ಶಾಂಟೊ ಅವರನ್ನು ಪೆವಿಲಿಯನ್‌ಗಟ್ಟಿದರು. ಶಾಂಟೊ 32 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು. ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾದ ಎಲ್ಲಾ ಬ್ಯಾಟ್ಸ್ಮನ್ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು.
ಸೂರ್ಯಕುಮಾರ್ ಯಾದವ್ ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿ ಮೊತ್ತ ಕಲೆಹಾಕಿದರು. ತಂಡದ ಪರ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು.
ಈ ಆರಂಭದ ಲಾಭವನ್ನು ಪಡೆದುಕೊಂಡು ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮವಾಗಿ ಬ್ಯಾಟ್ ಮಾಡಿದರು. ಹೀಗಾಗಿ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿತು.
https://x.com/BCCI/status/1804572959564276182?t=_Q78w1Bw7Hmvinyyr7Ij-A&s=19
ಮಳೆಗಾಲ ಶುರುವಾಗಿದೆ… ಇದು ಶೀತ- ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ