newsics.com
ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ಮೇಲೆ ಗೋವಾದಲ್ಲಿ ಬೆಟ್ಟಿಂಗ್ ಆಡುತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ಮೇಲೆ ಗೋವಾದಲ್ಲಿ ಬೆಟ್ಟಿಂಗ್ ನಡೆಯುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಒಂದು ಮನೆಯ ಮೇಲೆ ದಾಳಿ ಮಾಡಿ ಸ್ಥಳದಿಂದ ಮೂವರು ಯುವಕರನ್ನು ಬಂಧಿಸಿದ್ದಾರೆ. ಒಂದು ಲ್ಯಾಪ್‌ಟಾಪ್ ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಪಣಜಿ ಬಳಿಯ ಪಿಲಾರ್ನೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ಭಾರತ-ಬಾಂಗ್ಲಾದೇಶ ಪಂದ್ಯದ ಮೇಲೆ ಕೆಲವು ಯುವಕರು ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ದಾಳಿ ನಡೆಸಿ ಮೂವರು ಯುವಕರನ್ನು ಬಂಧಿಸಿದ್ದಾರೆ. ದಾಳಿಯ ಸಮಯದಲ್ಲಿ, ಪೊಲೀಸರು ರಿಜ್ವಾನ್ ಭಾಷ್ (20), ಆಸಿಫ್ ಜಿಯಾವುದ್ದೀನ್ (25) ಮತ್ತು ಮಕ್ಸೂದ್ ಮೋಡನ್ (28) ಅವರನ್ನು ಬಂಧಿಸಿದ್ದು, ಈ ಮೂವರೂ ಗುಜರಾತ್ ನಿವಾಸಿಗಳು ಎಂದು ತಿಳಿದುಬಂದಿದೆ.