newsics.com
ಶಿವಮೊಗ್ಗ : ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಕೊನೇರಿಪುರದ 55 ವರ್ಷದ ಮಹಿಳೆಗೆ ಜ.23ರಂದು ಕೆಎಫ್ಡಿ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಜ.23ರಂದು ಮಹಿಳೆಗೆ ಕೆಎಫ್ಡಿ ಪಾಸಿಟಿವ್ ಬಂದಿತ್ತು. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಸುಧಾರಣೆ ಕಾಣದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಜ.29ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕೆಎಫ್ಡಿ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆ ಫೆ.5ರಂದು ಪುನಃ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸಂದಿಸದೇ ಮಹಿಳೆ ಮೃತಪಟ್ಟಿದ್ದಾರೆ.