newsics.com
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಖ್ಯಾತಿಯ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಬುಧವಾರ ಅಧಿಕೃತ ತೆರೆಬಿದ್ದಿದೆ.
ಬುಧವಾರ ತ್ರಿವೇಣಿ ಸಂಗಮದಲ್ಲಿನಡೆದ ಕೊನೆಯ ಅಮೃತ ಸ್ನಾನದಲ್ಲಿ 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ. ಕೊನೆಯ ದಿನವಾದ ಬುಧವಾರ 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ.
ಜನವರಿ 13ರಂದು ಆರಂಭವಾದ ಮಹಾಕುಂಭಮೇಳದಲ್ಲಿ ಇದುವರೆಗೆ 66 ಕೋಟಿ ಜನರು ಪುಣ್ಯ ಸ್ನಾನ ಮಾಡಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಆಯೋಜಿಸಲಾದ ಮಾನವೀಯತೆಯ ‘ಮಹಾ ಯಜ್ಞ’, ನಂಬಿಕೆ, ಏಕತೆ ಮತ್ತು ಸಮಾನತೆಯ ಮಹಾ ಉತ್ಸವ ‘ಮಹಾಕುಂಭ 2025′ ಬುಧವಾರ ಮಹಾಶಿವರಾತ್ರಿಯ ಪವಿತ್ರ ಸ್ನಾನದೊಂದಿಗೆ ಪರಾಕಾಷ್ಠೆಯತ್ತ ಸಾಗುತ್ತಿದೆ. ಜನವರಿ 13 ಪೌಷ ಪೂರ್ಣಿಮೆಯಿಂದ ಪ್ರಾರಂಭವಾಗಿ ಫೆಬ್ರವರಿ 26 ಇಂದು ಮಹಾಶಿವರಾತ್ರಿಯವರೆಗೆ 45 ದಿನಗಳಲ್ಲಿ 66 ಕೋಟಿ 21 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ತ್ರಿವೇಣಿಯಲ್ಲಿ ಸ್ನಾನ ಮಾಡಿದ್ದಾರೆ. ಇದು ವಿಶ್ವ ಇತಿಹಾಸದಲ್ಲಿ ಅಭೂತಪೂರ್ವ – ಅವಿಸ್ಮರಣೀಯ…’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
https://x.com/ANI/status/1894750770672914859?t=OA6gfbgd8M6Xc1uLtcK22A&s=19
ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದವಳ ಜುಟ್ಟು ಹಿಡಿದು ಕಿರುಚಾಡಿ ರನ್ನರ್ ಅಪ್ miss amazonas