newsics.com
ಬೆಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಪ್ರಶ್ನೆ ಮಾಡಿದ ಕಾಂಗ್ರೆಸ್ ನಾಯಕಿಗೆ ಕಾರಿನಲ್ಲಿದ್ದ ವ್ಯಕ್ತಿ ಅಶ್ಲೀಲ ರೂಪದಲ್ಲಿ ಮಿಡಲ್ ಫಿಂಗರ್ ತೋರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಗೋಪಾಲನ್ ಮಾಲ್ ಬಳಿ ಬುಧವಾರ ಸಂಜೆ ವೇಳೆ ನಡೆದಿದೆ.
ಕಾರಿನಲ್ಲಿ ಹೋಗುತ್ತಿದ್ದ ಯುವತಿಗೆ ಇನ್ನೊಂದು ಕಾರಿನಲ್ಲಿದ್ದ ವ್ಯಕ್ತಿ ಅಶ್ಲೀಲ ಸಿಂಬಲ್ ತೋರಿಸಿ ಕಿರಿಕ್ ಮಾಡಿಕೊಂಡಿದ್ದಾರೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಅಕ್ಷತಾ ರವಿಕುಮಾರ್ ಅವರಿಗೆ ಅಶ್ಲೀಲ ಸಿಂಬಲ್ ತೋರಿಸಿದ ಬಗ್ಗೆ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದರು.
ಈ ವಿಡಿಯೋ ಆಧರಿಸಿ ದೂರು ದಾಖಲಿಸಿಕೊಂಡ ಚಾಮರಾಜಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಟ್ರಾಫಿಕ್ ರೂಲ್ಸ್ ಫಾಲೋ ಮಾಡದೆ ಡ್ರೈವಿಂಗ್ ಮಾಡ್ತಿದ್ದ ಕಾರು ಚಾಲಕ (ಕಾರಿನ ಸಂಖ್ಯೆ KA 41 M 4191) ಹರ್ಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ಬೆಂಗಳೂರು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ದೂರು ಕೊಟ್ಟಿರುವ ಯುವತಿಯನ್ನು ಸಂಪರ್ಕಿಸಿ ಠಾಣೆಗೆ ಬಂದು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಯುವತಿ ಹೇಳಿಕೆಯನ್ನು ಪಡೆದು ಅಶ್ಲೀಲವಾಗಿ ಬೆರಳು ತೋರಿಸಿದ ವ್ಯಕ್ತಿಯ ಮೇಲೆ ಕಾನೂನು ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಅಕ್ಷತಾ ರವಿಕುಮಾರ್, ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಗೋಪಾಲನ್ ಮಾಲ್ ಬಳಿ ಘಟನೆ ನಡೆದಿದೆ. ಹಿಂದಿನಿಂದ ಬಂದು ಹಾರ್ನ್ ಮಾಡಿದರು. ಆಗ ನನಗೆ ಜಾಗ ಬಿಡಲು ಸಾಧ್ಯವಾಗಿಲ್ಲ. ಏಕಾಏಕಿ ಬಯ್ಯೋದಕ್ಕೆ ಪ್ರಾರಂಭ ಮಾಡಿದರು. ನಾನು ಮತ್ತೆ ಪ್ರಶ್ನೆ ಮಾಡಿದ್ದಕ್ಕೆ ಅಶ್ಲೀಲವಾಗಿ ಬೆರಳು ತೋರಿಸಿದರು. ಆ ಕಾರಣಕ್ಕೆ ನಾನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಳ್ಳಲು ಯತ್ನಿಸಿದರೂ ಟ್ರಾಫಿಕ್‌ನಿಂದಾಗಿ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
https://x.com/AkshathaRaviku2/status/1894702053399871506
Video viral ಮೆಟ್ರೋದಲ್ಲಿ ಯುವತಿಗೆ ಬಾಡಿ ಶೇಮಿಂಗ್: ಆಗಿದ್ದೇನು? ವಿಡಿಯೋ ನೋಡಿ
Vishnu Bhat arrest ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಬಂಧನ, ಆಗಿದ್ದೇನು?