Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pramod Muthalik ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿಷೇಧ: ವಾಪಸ್ ಕಳಿಸಿದ ಪೊಲೀಸರು
ಕರ್ನಾಟಕಪ್ರಮುಖ

Pramod Muthalik ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿಷೇಧ: ವಾಪಸ್ ಕಳಿಸಿದ ಪೊಲೀಸರು

Share
1 Min Read
SHARE

newsics.com

ಶಿವಮೊಗ್ಗ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಶಿವಮೊಗ್ಗದಲ್ಲಿ ಮಾರ್ಚ್ 1ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7 ದಿನಗಳ ಕಾಲ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಶ್ರೀರಾಮ ಸೇನೆ ವತಿಯಿಂದ ಪ್ರಕಟಿಸಲಾದ ಲವ್ ಜಿಹಾದ್ ಪುಸ್ತಕ ಬಿಡುಗಡೆಗಾಗಿ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ನಂತರ ಭದ್ರಾವತಿಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಿತ್ತು. ಆದರೆ, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ -ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ನಲ್ಲಿ ಪ್ರಮೋದ್ ಮುತಾಲಿಕ್ ಅವರ ಕಾರ್ ತಡೆದ ಪೊಲೀಸರು ಆದೇಶ ಪ್ರತಿ ತೋರಿಸಿ ಶಿವಮೊಗ್ಗ ಪ್ರವೇಶಿಸದಂತೆ ಹೇಳಿದ್ದಾರೆ.

ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ. ಕಾಂತೇಶ್, ದೀನದಯಾಳು, ರಾಜೇಶ್ ಶಾಸ್ತ್ರಿ ಸೇರಿದಂತೆ ಹಲವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಸ್ತೆಯಲ್ಲಿಯೇ ಲವ್ ಜಿಹಾದ್ ಪುಸ್ತಕ ಮತ್ತು ಪೋಸ್ಟರ್ ಗಳನ್ನು ಪ್ರಮೋದ್ ಮುತಾಲಿಕ್ ಬಿಡುಗಡೆ ಮಾಡಿ ಕಾರ್ ನಲ್ಲಿಯೇ ಕುಳಿತು ಊಟ ಮಾಡಿದ್ದಾರೆ. ತಡರಾತ್ರಿಯೇ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿ ದಾಟಿಸಿದ್ದು, ಎನ್.ಆರ್. ಪುರಕ್ಕೆ ಬಿಡಲಾಗಿದೆ.

TAGGED:Sri Ram Sena founder Pramod Muthalik was banned from entering Shimoga and sent back by the police
Share This Article
Facebook Twitter Copy Link Print
Previous Article High alert ಬಳ್ಳಾರಿಯ ಸರ್ಕಾರಿ ‘ಪೌಲ್ಟ್ರಿ ಫಾರ್ಮ್’ ನಲ್ಲಿ 2400 ಕೋಳಿಗಳು ಸಾವು : ಹೈ ಅಲರ್ಟ್ ಘೋಷಣೆ
Next Article ಉಷ್ಣ ಅಲೆ ಹಿನ್ನೆಲೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?