Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!
ಕರ್ನಾಟಕ

ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Share
1 Min Read
SHARE

newsics. Com

ಬೆಂಗಳೂರು: ಗೋಬಿ ಬಳಿಕ ಇದೀಗ ಕಬಾಬ್‌ಗೂ ಕೃತಕ ಬಣ್ಣ  ಬಳಕೆಗೂ ರಾಜ್ಯ ಸರ್ಕಾರ ನಿಷೇಧ ಹೇರಿದೆ.

ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್‌  ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗೆ  ಬೆರಸುವ ಕೃತಕ ಬಣ್ಣ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು.

ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ ಎಂದು ಸೂಚಿಸಿದೆ.

ಕೃತಕ ಬಣ್ಣಗಳನ್ನು ಬಳಸಿರುವುದು ಕಂಡುಬಂದಲ್ಲಿ ತಯಾರಿಸುವವರ ಮೇಲೆ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Share This Article
Facebook Twitter Copy Link Print
Previous Article ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ
Next Article ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?