newsics.com
ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನಲ್ಲಿ ನಡೆದಿದೆ.
ಈ ವೇಳೆ ಓರ್ವ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ ತಾಯಿ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಈ ಘಟನೆ ನಡೆದಿತ್ತು. ತಾಯಿ ಶಾರದಾ ಹಾಗೂ ಇಬ್ಬರು ಮಕ್ಕಳಾದ ಅಮೃತಾ, ಆದರ್ಶ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಅನುಕ್ಷಾ ಡಾಳೆ ಎಂಬ ಓರ್ವ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಅನುಕ್ಷಾ ಕೂಡ ಕೊನೆಯುಸಿರೆಳೆದಿದ್ದಾಳೆ.
ಶಾರದಾ ಪತಿ ಅಶೋಕ್ ಡಾಳೆ ಪ್ರತಿದಿನ ಕುಡಿದುಬಂದು ಹಿಂಸಿಸುತ್ತಿದ್ದ. ಹೊಡೆಯುವುದು, ಕಿರುಕುಳ ನೀಡುವುದು ಮಾಡುತ್ತಿದ್ದ. ಇದರಿಂದ ನೊಂದ ಶಾರದಾ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿಯ ಕಿರುಕುಳದಿಂದ ಬೇಸತ್ತ ಶಾರದಾ ಇಂದು ತನ್ನ ಮೂರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಡಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪತಿ ಅಶೋಕ್ ನನ್ನು ಪೊಲೀಸರು ಬಂಧಿಸಿದ್ದಾರೆ.