newsics.com
ಬೆಂಗಳೂರು: ನಟಿ ರನ್ಯಾ ರಾವ್ ರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧವನ್ನು ವಿಧಿಸಿದೆ.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ರಾಮಚಂದ್ರ ರಾವ್ ಪ್ರತಿಕ್ರಿಯಿಸಿದ್ದು, ಆಕೆ ನಮ್ಮೊಂದಿಗೆ ವಾಸಿಸುತ್ತಿಲ್ಲ ಎಂದು ಹೇಳುವ ಮೂಲಕ ಪ್ರಕರಣದಿಂದ ಅಂತವನ್ನು ಕಾಯ್ದುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಮಚಂದ್ರರಾವ್, ಮಾಧ್ಯಮಗಳ ಮೂಲಕ ಈ ವಿಚಾರ ನನ್ನ ಗಮನಕ್ಕೆ ಬಂದಾಗ ಒಂದು ಕ್ಷಣ ಆಘಾತಕ್ಕೆ ಒಳಗಾದೆ. ಮೂರು ತಿಂಗಳ ಹಿಂದಷ್ಟೇ ರನ್ಯಾ ಮದುವೆ ಮಾಡಿಕೊಂಡು ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದರು. ಈ ವಿಷಯದ ಬಗ್ಗೆ ನನಗೆ ತಿಳಿದಿರಲಿಲ್ಲ. ವಿಚಾರ ಕಿವಿಗೆ ಬಿದ್ದಾಗ ನಾನು ಆಘಾತಕ್ಕೊಳಗಾದೆ. ನನ್ನ ವೃತ್ತಿ ಬದುಕಿನಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದಂತೆ ಸೇವೆ ಸಲ್ಲಿಸಿದ್ದೇನೆ. ಕಾನೂನು ಅದರ ಕೆಲಸ ಮಾಡುತ್ತದೆ. ಪ್ರಕರಣದ ಬಗ್ಗೆ ಹೆಚ್ಚಾಗಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ ಎಂದು ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ರಾಮಚಂದ್ರ ರಾವ್ ತಿಳಿಸಿದ್ದಾರೆ.