newsics.com
ಬೆಂಗಳೂರು : ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ನನಗೆ ಬಹಳ ಇಷ್ಟ. ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟ ಕಿಶೋರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಧಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಅಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ನನಗೆ ಬಹಳ ಇಷ್ಟ ಆಯಿತು. ಬೆಂಗಳೂರಿನ ಸುಲೋಚನಾ ಸಭಾಂಗಣದಲ್ಲಿ ನಟಕಿಶೋರ್ ಹೇಳಿದ್ದಾರೆ.