newsics.com
ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ಭದ್ರತೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಕೊಡವ ಸಂಘಟನೆ ಪತ್ರ ಬರೆದಿದೆ.
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ. ಅವರು ಶ್ರೇಷ್ಠ ನಟಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಅವರ ಸ್ವಂತ ನಿರ್ಧಾರ ಹಾಗೂ ಆಕೆಯ ಆಯ್ಕೆಗಳ ಸ್ವಾತಂತ್ರ್ಯದ ಹಕ್ಕನ್ನು ನಾವೆಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ, ನಿರೀಕ್ಷೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿರುವ ಕಾರಣದಿಂದಲೇ ಹೀಗೆಲ್ಲ ನಡೆದುಕೊಳ್ಳುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಪತ್ರದಲ್ಲಿ ತಿಳಿದ್ದಾರೆ.