Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya gold smuggling case ರನ್ಯಾ ಚಿನ್ನ ಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ
ಕರ್ನಾಟಕದೇಶಪ್ರಮುಖ

Ranya gold smuggling case ರನ್ಯಾ ಚಿನ್ನ ಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

Share
2 Min Read
SHARE

newsics.com

ಬೆಂಗಳೂರು: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ.

ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.

ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ನಟಿ ರನ್ಯಾ ಚಿನ್ನ ಸಾಗಣೆ ಮಾಡುವಾಗ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿ ನೇಮಿಸಲಾಗಿದೆ. ಇವರು ತಕ್ಷಣ ತನಿಖೆ ಪ್ರಾರಂಭಿಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕಿದೆ.

ಪ್ರಕರಣ ಸಂಬಂಧ ಉದ್ಯಮಿ ಪುತ್ರ ತರುಣ್ ರಾಜು ಎಂಬುವರನ್ನು ಡಿಆರ್‌ಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

ಮತ್ತೊಂದೆಡೆ, ವಿಧಾನಸಭೆ ಕಲಾಪದಲ್ಲಿಯೂ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ ಭಾರೀ ಸದ್ದು ಮಾಡಿದೆ. ರಾಜಕಾರಣಿಗಳ ಕೈವಾಡದ ಆರೋಪ, ಪ್ರಭಾವಿ ವ್ಯಕ್ತಿಗಳು ರನ್ಯಾ ಹಿಂದಿರುವ ಅನುಮಾನಗಳು ರಾಜಕೀಯವಾಗಿಯೂ ಪ್ರಕರಣ ಸದ್ದು ಮಾಡುವಂತೆ ಮಾಡಿದೆ. ಹೀಗಾಗಿ ಗೃಹ ಇಲಾಖೆ ರಾಮಚಂದ್ರ ರಾವ್ ಬಗ್ಗೆಯೂ ತನಿಖೆಗೆ ಆದೇಶಿಸಿದೆ.

ಚಿನ್ನ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲುಪಾಲಾಗಿರುವ ರನ್ಯಾ ರಾವ್ ವಿಚಾರದಲ್ಲಿ ಶಿಷ್ಟಾಚಾರ ದರ್ಬಳಕೆಯಾಗಿರುವ ಬಗ್ಗೆ ಪೊಲೀಸ್ ಆಯುಕ್ತರಿಗೆ ಡಿಸಿಪಿ ಸುಚಿತ್ ವರದಿ ಸಲ್ಲಿಸಿದ್ದಾರೆ. ರನ್ಯಾ ಬಂಧನಕ್ಕೊಳಗಾದ ದಿನ ಶಿಷ್ಟಾಚಾರ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಬಸವರಾಜ್ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದುಬೈನಿಂದ ಬರುವಾಗಲೇ ಕಾನ್‌ಸ್ಟೇಬಲ್‌ ಬಸವರಾಜ್‌ಗೆ ರನ್ಯಾ ಕರೆ ಮಾಡಿದ್ದಾರೆ. ಟರ್ಮಿನಲ್‌ 1ಕ್ಕೆ ಬರುವುದಾಗಿ ತಿಳಿಸಿದ್ದಾರೆ. ಈ ವೇಳೆ, ‘ಇಲ್ಲ ಮೇಡಂ, ಬೇರೆ ಅಫೀಸರ್‌ ಬರುತ್ತಿದ್ದಾರೆ ಅವರನ್ನು ರಿಸೀವ್ ಮಾಡಿಕೊಳ್ಳಬೇಕು’ ಎಂದು ಬಸವರಾಜ್ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ರನ್ಯಾ, ‘ನೀವೇ ಬರಬೇಕು. ಇಲ್ಲಾಂದ್ರೆ ಅಪ್ಪಾಜಿಗೆ ಹೇಳುತ್ತೇನೆ’ ಎಂದು ಬೆದರಿಸಿದ್ದರು. ಈ ವಿಚಾರವನ್ನು ಪೊಲೀಸ್ ಆಯುಕ್ತರಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Ranya gold smuggling ರನ್ಯಾ ಕೇಸ್: ಏಟ್ರಿಯಾ ಹೋಟೆಲ್ ಓನರ್ ಮೊಮ್ಮಗ ಅರೆಸ್ಟ್, ರನ್ಯಾ ಜೈಲುಪಾಲು, ಕೇಸ್‌ನಲ್ಲಿ ಇಬ್ಬರು ಸಚಿವರ ಹೆಸರು!

Actress aditi ಗುಟ್ಟಾಗಿ ಮದುವೆಯಾದ ಆರೇ ತಿಂಗಳಿಗೆ ಡಿವೋರ್ಸ್ ನೀಡಲು ಮುಂದಾದ ನಟಿ ಅದಿತಿ‌, ಟ್ರಯಲ್‌ಗಾಗಿ ವಿವಾಹವಾಗಿದ್ದರಂತೆ!

anorexia nervosa ಸೋಷಿಯಲ್ ಮೀಡಿಯಾ ಡಯೆಟ್: ಅನೋರೆಕ್ಸಿಯಾ ನರ್ವೋಸಾಗೆ ಪಿಯು ವಿದ್ಯಾರ್ಥಿನಿ ಬಲಿ

Love and marry ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀರಿ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ

Supreme Court judgement ಅತ್ಯಾಚಾರ ದೃಢಪಡಿಸಲು ಖಾಸಗಿ ಭಾಗದ ಗಾಯದ ಗುರುತು ಅಗತ್ಯವಿಲ್ಲ: ಸುಪ್ರೀಂ

TAGGED:Ranya gold smuggling case: Investigation ordered against DGP Ramachandra Rao
Share This Article
Facebook Twitter Copy Link Print
Previous Article Actress aditi ಗುಟ್ಟಾಗಿ ಮದುವೆಯಾದ ಆರೇ ತಿಂಗಳಿಗೆ ಡಿವೋರ್ಸ್ ನೀಡಲು ಮುಂದಾದ ನಟಿ ಅದಿತಿ‌, ಟ್ರಯಲ್‌ಗಾಗಿ ವಿವಾಹವಾಗಿದ್ದರಂತೆ!
Next Article Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?