newsics.com
ಕರಾಚಿ: ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಚಲಿಸುತ್ತಿದ್ದ ಜಾಫರ್ ಎಕ್ಸ್ ಪ್ರೆಸ್ ರೈಲನ್ನೇ ವಶಕ್ಕೆ ಪಡೆದು, ಪ್ರಯಾಣಿಸುತ್ತಿದ್ದ ನೂರಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದೆ.
ಈ ಬಗ್ಗೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೇಳಿಕೊಂಡಿದ್ದು, 300 ಪ್ರಯಾಣಿಕರನ್ನು ಬಿಡುಗಡೆಗೊಳಿಸಿದೆ.
ಕ್ವೆಟ್ಟಾದಿಂದ ಬಲೂಚಿಸ್ತಾನದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಬಲೂಚಿಸ್ತಾನ ಪ್ರಾಂತ್ಯದಲ್ಲಿ ವಶಕ್ಕೆ ಪಡೆದ ಲಿಬರೇಶನ್ ಆರ್ಮಿ, ರೈಲಿಗೆ ಬೆಂಕಿ ಹಚ್ಚಿದೆ ಎಂದು ವರದಿಗಳು ತಿಳಿಸಿವೆ.
ರೈಲಿನಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಪಾಕಿಸ್ತಾನದ ಭದ್ರತಾ ಪಡೆಗಳು ಈ ಪ್ರದೇಶದತ್ತ ಸಾಗುತ್ತಿವೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪ್ರತ್ಯೇಕತಾವಾದಿ ಭಯೋತ್ಪಾದಕರು ಪ್ಯಾಸೆಂಜರ್ ರೈಲಿನ ಮೇಲೆ ದಾಳಿ ನಡೆಸಿದ್ದು, ರೈಲು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ರೈಲು ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾದಿಂದ ಖೈಬರ್ ಪಖ್ತುನ್ಖ್ವಾದ ಪೇಶಾವರಕ್ಕೆ ತೆರಳುತ್ತಿತ್ತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಎಂಬ ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಿಂದ ಒತ್ತೆಯಾಳುಗಳನ್ನು ತೆಗೆದುಕೊಂಡಿರುವುದಾಗಿ ಹೇಳಿಕೊಂಡಿದೆ.
Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ