newsics.com
ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯ ಬಿಜೆಪಿ ನಾಯಕಿಯಾಗಿ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರಿನ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದರು. ನಿನ್ನೆಯಷ್ಟೇ ಮಂಜುಳಾ ಅವರ ಅಧಿಕಾರಾವಧಿ ಅಂತ್ಯವಾಗಿತ್ತು.
ಮಂಗಳವಾರ ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ.
ಕೂಡಲೇ ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜುಳಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
DYSP Arrest ವಕೀಲೆ ಜೀವಾ ಆತ್ಮಹ*ತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ
Gold smuggling case ಚಿನ್ನ ಅಕ್ರಮ ಸಾಗಣೆ: ನಟಿ ರನ್ಯಾ ಮನೆ ಮೇಲೆ ಸಿಬಿಐ ದಾಳಿ