Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > actresses in trouble again ಸ್ಯಾಂಡಲ್‌ವುಡ್ ನಟಿಯರಿಬ್ಬರಿಗೆ ಮತ್ತೆ ಸಂಕಷ್ಟ, ಜೈಲು ವಾಸ ಆತಂಕ
ಕರ್ನಾಟಕದೇಶಪ್ರಮುಖಮನರಂಜನೆ

actresses in trouble again ಸ್ಯಾಂಡಲ್‌ವುಡ್ ನಟಿಯರಿಬ್ಬರಿಗೆ ಮತ್ತೆ ಸಂಕಷ್ಟ, ಜೈಲು ವಾಸ ಆತಂಕ

Share
2 Min Read
SHARE

newsics.com

ಸ್ಯಾಂಡಲ್‌ವುಡ್‌ ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು ಸಿನಿಮಾ ರಂಗವನ್ನೇ ಬೆಚ್ಚಿ ಬೀಳಿಸಿದ ಬೆನ್ನಲ್ಲೇ ಮತ್ತಿಬ್ಬರು ನಟಿಯರಿಗೆ ಸಂಕಷ್ಟ ಎದುರಾಗಿದೆ. ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರ ಡ್ರಗ್‌ ಕೇಸ್ ಮತ್ತೆ ಮುನ್ನೆಲೆಗೆ ಬಂದಿದೆ. ಸಿಸಿಬಿ ಸ್ಯಾಂಡಲ್‌ವುಡ್‌‌ನ ಇಬ್ಬರು ನಟಿಯರಿಗೆ ಶಾಕ್ ಕೊಟ್ಟಿದೆ. ನಟಿ ಸಂಜನಾ ಮತ್ತು ರಾಗಿಣಿ ಜೊತೆಗೆ ವಿರೇನ್ ಖನ್ನಾನ್ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಅನುಮತಿ ಪಡೆದು ಸುಪ್ರೀಂನಲ್ಲಿ ಸಿಸಿಬಿ ಅರ್ಜಿ ಸಲ್ಲಿಸಿದೆ.

ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಲು ಸಾಧ್ಯವಿದೆ ಎಂದು ಕಾನೂನು ಇಲಾಖೆಯಿಂದ ಮಾಹಿತಿ ಸಿಕ್ಕಿದ ಬಳಿಕ ಗೃಹ ಇಲಾಖೆಯಿಂದ ಅನುಮತಿ ಪಡೆದು ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಸಿಸಿಬಿ, ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ.

ಮಾದಕ ವಸ್ತು ಸರಬರಾಜಿಗೆ ಸಹಕಾರ ನೀಡಿರುವ ಮತ್ತು ಮಾದಕ ವಸ್ತು ಸೇವನೆ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ನಟಿಯರು ಅರ್ಜಿ ಸಲ್ಲಿಸಿದ್ದರು.

ಹೀಗಾಗಿ ಹೈಕೋರ್ಟ್ ಎಫ್‌ಐಆರ್ ರದ್ದು ಮಾಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸಿಸಿಬಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ. ಒಂದು ವೇಳೆ ಸಿಸಿಬಿ ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿದ್ದೇ ಆದಲ್ಲಿ ಸ್ಯಾಂಡಲ್‌ವುಡ್‌ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಮತ್ತೆ ಸಂಕಷ್ಟ ತಪ್ಪಿದ್ದಲ್ಲ.

ಮಾದಕ ದ್ರವ್ಯಗಳನ್ನು ಸೇವಿಸುವ ಮತ್ತು ಸರಬರಾಜು ಮಾಡುವ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆಯಡಿಯಲ್ಲಿ 2020ರ ಸೆಪ್ಟೆಂಬರ್‌ ನಲ್ಲಿ ತುಪ್ಪದ ಬೆಡಗಿ ರಾಗಿಣಿ ಬಂಧನವಾಗಿತ್ತು. 4 ತಿಂಗಳ ಬಳಿಕ 2021ರ ಜನವರಿ ಕೊನೆಯ ವಾರದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡರು. ಬಳಿಕ ತನ್ನ ಮೇಲಿನ ಪ್ರಕರಣ ರದ್ದು ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ರಾಗಿಣಿ ಮೇಲಿರುವ ಎಫ್‌ಐಆರ್‌ ರದ್ದುಗೊಳಿಸಿತ್ತು.

ಇದೇ ಡ್ರಗ್ಸ್ ಪ್ರಕರಣದಲ್ಲಿ 2020 ಸೆಪ್ಟೆಂಬರ್ 8ರಂದು ನಟಿ ಸಂಜನಾ ಗಲ್ರಾನಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಸಂಜನಾರನ್ನು ಬಂಧಿಸಿತ್ತು.

ರೇವ್‌ ಪಾರ್ಟಿಗಳಲ್ಲಿ ಸಂಜನಾ ಡ್ರಗ್ಸ್ ಗೆ ಅವಕಾಶ ಮಾಡಿಕೊಂಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ನಟಿ ಸುಮಾರು ನಾಲ್ಕು ತಿಂಗಳು ಜೈಲುವಾಸ ಅನುಭವಿಸಿ ಬಳಿಕ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸಂಜನಾ ತಮ್ಮ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಮನವಿ ಸಲ್ಲಿಸಿದ್ದು, ಹೈಕೋರ್ಟ್ ಸಂಜನಾ ಮೇಲಿರುವ ಎಫ್‌ಐಆರ್‌ ರದ್ದುಗೊಳಿಸಿತ್ತು.

ರನ್ಯಾ ಸಿಕ್ಕಿಬೀಳಲು ಗಂಡ ಜತಿನ್ ಕಾರಣನಾ? ರನ್ಯಾಗೆ ದುಬಾರಿ ಗಿಫ್ಟ್ ಕೊಟ್ಟ ಸಚಿವರು ಯಾರು?

TAGGED:fear of jail timeTwo Sandalwood actresses in trouble again
Share This Article
Facebook Twitter Copy Link Print
Previous Article Earthquake ಮಡಿಕೇರಿಯ ಕೆಲವೆಡೆ ಭೂಕಂಪನ ಅನುಭವ, ಜನರಿಗೆ ಗಾಬರಿ
Next Article CM statement sparks controversy ಐದು ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಕೈ ಪಡೆಯಲ್ಲಿ ಮತ್ತೆ ಅಪಸ್ವರ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?