newsics.Com
ಮಂಗಳೂರು : ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಮಾಹಿತಿ ನೀಡಲಾಗಿದೆ. ಇನ್ನು ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲೂ ಮಳೆಯಾರ್ಭಟ ಮುಂದುವರೆದಿದ್ದು, ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಂಇಕ ಹಾಗೂ ಪ್ರೌಢಶಾಲೆಯ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನಿರ್ದೇಶನದ ಮೇಲೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಪ್ರಕಾಶ್ ಆದೇಶ ಹೊರಡಿಸಿದ್ದಾರೆ.