Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ವಾಡಿ ಮನೆ ಹೋಳಿ ಊಟ ತಿಂದ ಹಾಸ್ಟೆಲ್‌ನ 30 ಮಕ್ಕಳು ಆಸ್ಪತ್ರೆಗೆ ದಾಖಲು, ಓರ್ವ ವಿದ್ಯಾರ್ಥಿ ಸಾವು
ಕರ್ನಾಟಕಪ್ರಮುಖ

ಮಾರ್ವಾಡಿ ಮನೆ ಹೋಳಿ ಊಟ ತಿಂದ ಹಾಸ್ಟೆಲ್‌ನ 30 ಮಕ್ಕಳು ಆಸ್ಪತ್ರೆಗೆ ದಾಖಲು, ಓರ್ವ ವಿದ್ಯಾರ್ಥಿ ಸಾವು

Share
1 Min Read
SHARE

newsics.com

ಮಂಡ್ಯ: ಹೋಳಿ ಹಬ್ಬದ ನಿಮಿತ್ತ ಮಾರ್ವಾಡಿ ಉದ್ಯಮಿಯೊಬ್ಬರು ಭರ್ಜರಿ ಊಟ ಮಾಡಿಸಿದ್ದರು. ಊಟ ಹೆಚ್ಚಾದ್ದರಿಂದ ಹತ್ತಿರದ ವಸತಿ ಶಾಲೆಗೆ ಕೊಟ್ಟಿದ್ದರು. ಈ ಊಟ ತಿಂದ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದ್ದು, ಫುಡ್ಸ್‌ ಪಾಯ್ಸನ್‌ನಿಂದ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿರುವ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ಈ ದುರಂತ ಸಂಭವಿಸಿದೆ. ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ಆಹಾರ ಸೇವಿಸಿದ 30 ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದೆ. ಕೂಡಲೇ ಅವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಕೆರ್ಲಾಂಗ್(13) ಎಂದು ಗುರುತಿಸಲಾಗಿದೆ.

ಈ ಘಟನೆಗೆ ಹಾಸ್ಟೆಲ್ ಸಿಬ್ಬಂದಯೇ ಕಾರಣವೆಂದು ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಶನಿವಾರ ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದರು. ಇನ್ನು ಹಬ್ಬಕ್ಕೆ ಮಾಡಿಸಿದ್ದ ಊಟ ಹೆಚ್ಚಾಗಿ ಉಳಿದಿದ್ದರಿಂದ ಅದನ್ನು ತಂದು ಹಾಸ್ಟೆಲ್‌ನಲ್ಲಿರುವ ಮಕ್ಕಳಿಗೆ ನೀಡಲಾಗಿತ್ತು. ಇನ್ನು ಹೋಳಿ ಹಬ್ಬಕ್ಕೆ ಮಾಡಿಸಿದ ಊಟವನ್ನು ರಾತ್ರಿ ಸೇವನೆ ಮಾಡಿದ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಮಕ್ಕಳು ಹೊಟ್ಟೆನೋವು, ವಾಂತಿ ಬೇಧಿಯಿಂದ ಬಳಲುತ್ತಿದ್ದರೂ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸದೆ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ. ಓರ್ವ ವಿದ್ಯಾರ್ಥಿ ಹೊಟ್ಟೆನೋವು ತಾಳಲಾರದೇ ಮೂರ್ಛೆ ಬಿದ್ದ ತಕ್ಷಣ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟೆರಲ್ಲಾಗಲೇ ಅರುಣಾಚಲ ಪ್ರದೇಶ ರಾಜ್ಯದಿಂದ ವಿದ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಭಾನುವಾರ ಬೆಳಗ್ಗೆ ಫುಡ್ ಪಾಯ್ಸನ್‌ನಿಂದ ಬಳಲುತ್ತಿದ್ದ ಇತರೆ 30 ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿದೆ. ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾರ್ವಾಡಿ ಕುಟುಂಬದವರೂ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಳವಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ವೈದ್ಯಾಧಿಕಾರಿ ಡಾ.ಮೋಹನ್ ಅವರು ಪರಿಶೀಲನೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಳವಳ್ಳಿ ಠಾಣೆಯಲ್ಲಿ FIR ದಾಖಲಿಸಲಾಗಿದೆ ಎಂದು ಜಿಲ್ಲಾ ರೋಗ್ಯಾಧಿಕಾರಿ ಮೋಹನ್ ತಿಳಿಸಿದರು.

A.R. Rahman hospitalized ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

TAGGED:30 hostel children admitted to hospital after eating Holi meal at Marwadi houseone student dies
Share This Article
Facebook Twitter Copy Link Print
Previous Article A.R. Rahman hospitalized ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 16-03-2025, ಭಾನುವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?