Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ತೆರಿಗೆ ಪಾವತಿ
ದೇಶಪ್ರಮುಖ

5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ತೆರಿಗೆ ಪಾವತಿ

Share
1 Min Read
SHARE

newsics.com

ನವದೆಹಲಿ: ದೇಶದ ಧಾರ್ಮಿಕ ಪ್ರವಾಸೋದ್ಯಮ ಆದಾಯದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಕಳೆದ ಐದು ವರ್ಷಗಳ ಅವಧಿಯಲ್ಲಿ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸರ್ಕಾರಕ್ಕೆ ಸುಮಾರು 400 ಕೋಟಿ ರೂಪಾಯಿ ತೆರಿಗೆ ಪಾವತಿಸಿದೆ ಎಂದು ತಿಳಿದುಬಂದಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರೈ ಈ ಮಾಹಿತಿ ನೀಡಿದ್ದು, ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಳೆದ ಐದು ವರ್ಷಗಳಲ್ಲಿ ಸರ್ಕಾರಕ್ಕೆ ಸುಮಾರು 400 ಕೋಟಿ ರೂಪಾಯಿ ತೆರಿಗೆ ಪಾವತಿಸಿದೆ. ಈ ಮೊತ್ತವನ್ನು ಫೆಬ್ರವರಿ 5, 2020 ರಿಂದ ಫೆಬ್ರವರಿ 5, 2025 ರ ನಡುವೆ ಪಾವತಿಸಲಾಗಿದೆ ಎಂದು ಅವರು ಹೇಳಿದರು.

ಇದರಲ್ಲಿ 270 ಕೋಟಿ ರೂಪಾಯಿಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆಗಿ ಪಾವತಿಸಲಾಗಿದ್ದು, ಉಳಿದ 130 ಕೋಟಿ ರೂಪಾಯಿಗಳನ್ನು ವಿವಿಧ ತೆರಿಗೆ ವರ್ಗಗಳ ಅಡಿಯಲ್ಲಿ ಪಾವತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಟ್ರಸ್ಟ್‌ನ ಹಣಕಾಸು ದಾಖಲೆಗಳನ್ನು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಅಧಿಕಾರಿಗಳು ನಿಯಮಿತವಾಗಿ ಲೆಕ್ಕಪರಿಶೋಧಿಸುತ್ತಾರೆ ಎಂದು ಚಂಪತ್ ರೈ ಹೇಳಿದರು.

ಅಯೋಧ್ಯೆಯು ಭಕ್ತರು ಮತ್ತು ಪ್ರವಾಸಿಗರಲ್ಲಿ ಹತ್ತು ಪಟ್ಟು ಹೆಚ್ಚಳ ಕಂಡಿದ್ದು, ಇದು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವಾಗಿ ಮಾರ್ಪಟ್ಟಿದೆ. ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ ಎಂದು ಚಂಪತ್ ರೈ ಅವರು ಹೇಳಿದರು. ಅಂತೆಯೇ ಮಹಾಕುಂಭದ ಸಮಯದಲ್ಲಿ 1.26 ಕೋಟಿ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.

ಕಳೆದ ವರ್ಷ, ಅಯೋಧ್ಯೆಗೆ 16 ಕೋಟಿ ಭಕ್ತರು ಆಗಮಿಸಿದ್ದು, 5 ಕೋಟಿ ಜನರು ರಾಮ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ ಎಂದು ಟ್ರಸ್ಟ್ ನ ಮೂಲಗಳು ತಿಳಿಸಿವೆ.

TAGGED:Ram Janmabhoomi Trust pays Rs 400 crore in tax in 5 years
Share This Article
Facebook Twitter Copy Link Print
Previous Article Ranya gold smuggling ದುಬೈನಲ್ಲಿ ಕಂಪನಿ ಆರಂಭಿಸಿದ್ದ ರನ್ಯಾ ರಾವ್: ತರುಣ್ ವಿಚಾರಣೆ ವೇಳೆ ಬಹಿರಂಗ
Next Article ಏಪ್ರಿಲ್‌ನಿಂದ ಬ್ಯಾಂಕ್‌ಗಳಿಗೆ ಎಲ್ಲ ಶನಿವಾರವೂ ರಜೆ, ವಾರಕ್ಕೆ ಐದೇ ದಿನ ಕೆಲಸ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?