newsics.com
ಕೊಲ್ಕತ್ತಾ: ಗಗನಯಾನಿ ಸುನಿತಾ ಮಿಲಿಯಮ್ಸ್ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ ರಕ್ಷಣಾ ತಂಡಗಳನ್ನು ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ಮಮತಾ ಬ್ಯಾನರ್ಜಿ, ವಿಲಿಯಮ್ಸ್ ಅವರ ಮೂಲ ಭಾರತವಾಗಿರುವುದರಿಂದ, ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು. ವಿಲಿಯಮ್ಸ್ ಮತ್ತು ಅವರ ತಂಡದ ಸದಸ್ಯರು ಬಾಹ್ಯಾಕಾಶದಲ್ಲಿದ್ದಾಗ ಅವರ ಸ್ಥಿತಿಯ ಬಗ್ಗೆ ನಿಯಮಿತವಾಗಿ ವಿಚಾರಿಸುತ್ತಿದ್ದೆ ಎಂದು ಹೇಳಿದರು
9 ತಿಂಗಳ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ನೋರ್ ಸೇರಿದಂತೆ ನಾಲ್ವರು ಗಗನಯಾನಿಗಳು ಸುರಕ್ಷಿತವಾಗಿ ಇಂದು ಮುಂಜಾನೆ 3.37ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ಲೋರಿಡಾದ ಕರಾವಳಿಗೆ ಬಂದಿಳಿದ್ದಾರೆ.
ಕಳೆದ ವರ್ಷ ಜೂನ್ 5ರಂದು ಬೋಯಿಂಗ್ನ ಸ್ಟಾರ್ಲಿಂಕ್ ಗಗನನೌಕೆಯಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ತೆರಳಿದ್ದ ಕ್ರೂ-9 ಮಿಷನ್ನ ಸಿಬ್ಬಂದಿ ಸುನಿತಾ ಮತ್ತು ಬುಚ್, ಗಗನನೌಕೆಯಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದಾಗಿ 9 ತಿಂಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಳ್ಳಬೇಕಾಯಿತು.