Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಇಂದಿನಿಂದ ಸತತ ಒಂದು ವಾರ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

Karnataka Rains: ಇಂದಿನಿಂದ ಸತತ ಒಂದು ವಾರ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲ ಬೇಗೆಯ ನಡುವೆ ಮುಂದಿನ ಒಂದು ವಾರ ನಾನಾ ಭಾಗಗಳಲ್ಲಿ ಮಳೆಯಾಗುವ ಖುಷಿ ವಿಚಾರವಿದು. ಬಹುತೇಕ ಎರಡು ತಿಂಗಳಿನಿಂದ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ಎಲ್ಲೆಡೆ ಬಿಸಿಲಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ.

ಜನ ಮಳೆ ನಿರೀಕ್ಷೆಯಲ್ಲಿರುವ ನಡುವೆ ಒಂದು ವಾರದಿಂದ ಕೊಡಗು, ಚಿಕ್ಕಮಗಳೂರು, ಮೈಸೂರು ಭಾಗದಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಈಗ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಒಂದು ವಾರದ ಅವಧಿಯಲ್ಲಿ ಲಘು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ಇದರಿಂದ ಕಲಬುರಗಿ ಸೇರಿದಂತೆ ಹಲವು ಭಾಗದಲ್ಲಿ ಬಿಸಿಲಿನಿಂದ ಬಳಲಿರುವ ಜನರಿಗೆ ಕೊಂಚ ನಿರಾಳತೆಯನ್ನು ಮಳೆ ತರಬಹುದು. ಇದಲ್ಲದೇ ಕೊಡಗಿನಲ್ಲಿ ಗುಡುಗು ಸಹಿತ ಕೊಂಚ ಜೋರಾದ ಮಳೆಯೇ ಆಗಬಹುದು ಎನ್ನುವ ಸೂಚನೆಯಿದೆ.

ಶುಕ್ರವಾರದಂದು ಕೊಡಗು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗುವ ಮುನ್ಸೂಚನೆಯಿದೆ. ಇದಲ್ಲದೇ ಉತ್ತರ ಕರ್ನಾಟಕದ ಬೀದರ್‌, ಕಲಬುರಗಿ, ಹಳೆ ಮೈಸೂರು ಭಾಗದ ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಲಘು ಮಳೆಯಾಗಲಿದ್ದು,ಗುಡುಗು ಕೂಡ ಇರಲಿದೆ.

ಮಾರ್ಚ್‌ 22 ರ ಶನಿವಾರದಂದು ಕೊಡಗು ಜಿಲ್ಲೆಯ ಪ್ರತ್ಯೇಕ ಸ್ಥಗಳಲ್ಲಿ ಹಗುರದಿಂದ ಸಾಧಾರಣೆ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಇರಲಿದೆ. ಇದಲ್ಲದೇ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂಋಉ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಕರ್ನಾಟಕದ ಒಳನಾಡನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿಯು ಬೀಸುವ ಸಾಧ್ಯತೆಯಿದೆ.

TAGGED:Karnataka Rains: Rain forecast for a week from today
Share This Article
Facebook Twitter Copy Link Print
Previous Article Anganwadi helper ಮಗುವಿನ ಕೈಗೆ ಬರೆ, ಗುದದ್ವಾರಕ್ಕೆ ಖಾರದಪುಡಿ ಹಾಕಿದ ಅಂಗನವಾಡಿ ಸಹಾಯಕಿ
Next Article SSLC EXAM ಇಂದಿನಿಂದ SSLC ಪರೀಕ್ಷೆಗಳು ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?