newsics.com
ಚೆನ್ನೈ: ಕರ್ನಾಟಕದ ಬೆಂಗಳೂರಿನಿಂದ ಕೇವಲ 4೦ ಕಿಲೋಮೀಟರ್ ದೂರದಲ್ಲಿರುವ, ತಮಿಳುನಾಡಿನ ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಣೆ ಮಾಡಿದ್ದಾರೆ.
ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ. ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು ಆಧುನಿಕ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದನ್ನು ಆರ್ಥಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಇದೆ. ಹೊಸೂರಿಗಾಗಿ ಹೊಸ ಮಾಸ್ಟರ್ ಪ್ಲಾನ್ ಕೂಡ ಅಂತಿಮ ಹಂತಕ್ಕೆ ಬಂದಿದೆ. ಹೊಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯವಾಗಿದೆ ಎಂದು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್ ತಿಳಿಸಿದರು.
ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ವರ್ಷಕ್ಕೆ ಸುಮಾರು 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ರೀತಿಯಲ್ಲಿ ಏರ್‌ಪೋರ್ಟ್ ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್ ನಿರ್ಮಾಣವಾದರೆ ಬೆಂಗಳೂರಿನ ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ ಸೇರಿ ಹಲವು ನಗರಗಳ ನಾಗರಿಕರಿಗೆ ಹೆಚ್ಚು ಅನುಕೂಲವಾಗಲಿದೆ.
ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ! ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ
ಗೆಳತಿ ಮೆಚ್ಚಿಸಲು ಕಂತೆ ಕಂತೆ ನೋಟು ಹಾಸಿದ ಉದ್ಯಮಿ, ವೈರಲ್ ವಿಡಿಯೋ ನೋಡಿ