Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sleep divorce  ಸ್ಲೀಪ್ ಡಿವೋರ್ಸ್ ನಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?
ಪ್ರಮುಖ

Sleep divorce  ಸ್ಲೀಪ್ ಡಿವೋರ್ಸ್ ನಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

Share
2 Min Read
SHARE

newsics.com
ಸಾಮಾನ್ಯವಾಗಿ ದಾಂಪತ್ಯ ಜೀವನದಿಂದ ಮುಕ್ತಿಯನ್ನು ಪಡೆಯಲು ದಂಪತಿಗಳು ವಿಚ್ಛೇದನದ ಮೊರೆ ಹೋಗ್ತಾರೆ. ಹೌದು ಹೆಚ್ಚಿನವರು ಡಿವೋರ್ಸ್‌ ಮೂಲಕ ಇಷ್ಟವಿಲ್ಲದ ಹಾಗೂ ಕಿರಿಕಿರಿ ಉಂಟು ಮಾಡುವ ಸಂಬಂಧದಿಂದ ಮುಕ್ತಿಯನ್ನು ಪಡೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ವಿಚ್ಛೇದನ ಪ್ರಕರಣಗಳು ತೀರಾ ಸಾಮಾನ್ಯವಾಗಿಬಿಟ್ಟಿದೆ. ಈ ನಡುವೆ ಸಂಬಂಧವನ್ನು ಬಲಪಡಿಸುವ ವಿಶೇಷ ಡಿವೋರ್ಸ್‌ ಪ್ರವೃತ್ತಿಯೊಂದು ಟ್ರೆಂಡ್‌ ಆಗುತ್ತಿದೆ.

ಏನಿದು ಸ್ಲೀಪ್‌ ಡಿವೋರ್ಸ್‌?

ಇತ್ತೀಚೆಗಿನ ದಿನಗಳಲ್ಲಿ ಸ್ಲೀಪ್‌ ಡಿವೋರ್ಸ್ ಟ್ರೆಂಡ್ ಆಗುತ್ತಿದೆ. ಸಾಮಾನ್ಯವಾಗಿ ದಂಪತಿಗಳು ಒಟ್ಟಿಗೆ ಮಲಗುತ್ತಾರೆ. ಆದರೆ ಈ ಸ್ಲೀಪ್ ಡಿವೋರ್ಸ್ ನಲ್ಲಿ ಉತ್ತಮ ಗುಣಮಟ್ಟದ ನಿದ್ರೆಗಾಗಿ ಸಂಗಾತಿಗಳು ಬೇರೆ ಬೇರೆ ಕೋಣೆಗಳಲ್ಲಿ ಮಲಗಲು ಇಷ್ಟ ಪಡುತ್ತಾರೆ. ಈ ಸ್ಲೀಪ್ ಡಿವೋರ್ಸ್ ನಲ್ಲಿ ಯಾವುದೇ ಅಡೆತಡೆಗಳಿಲ್ಲದೇ ಉತ್ತಮ ನಿದ್ರೆಯನ್ನು ಪಡೆಯುವ ಉದ್ದೇಶವಾಗಿದೆ. ಇಲ್ಲಿ ಮುಖ್ಯವಾಗಿ ದಂಪತಿಗಳು ದೈಹಿಕವಾಗಿ ದೂರವಿದ್ದರೂ ಭಾವನಾತ್ಮಕವಾಗಿ ಜೊತೆಯಿರುತ್ತಾರೆ. ಆದರೆ ಈ ನಿದ್ರೆ ವಿಚ್ಛೇದನ ಪ್ರವೃತ್ತಿಯೂ ಗಂಡ ಹೆಂಡತಿಯ ಸಂಬಂಧವನ್ನು ಬಲಪಡಿಸುತ್ತದೆ ಎನ್ನಲಾಗಿದೆ.

ರೆಸ್‌ಮೆಡ್‌ನ 2025 ರ ಜಾಗತಿಕ ನಿದ್ರೆಯ ಸಮೀಕ್ಷೆಯ ಪ್ರಕಾರ, ನಿದ್ರೆ ವಿಚ್ಛೇದನದಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಭಾರತದಲ್ಲಿ ಶೇಕಡಾ 78 ರಷ್ಟು ದಂಪತಿಗಳು ಸ್ಲೀಪ್ ಡಿವೋರ್ಸ್ ಪ್ರವೃತ್ತಿಯನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಇನ್ನು ಉಳಿದಂತೆ ಚೀನಾದಲ್ಲಿ ಶೇಕಡಾ 67 ಮತ್ತು ದಕ್ಷಿಣ ಕೊರಿಯಾ ಶೇಕಡಾ 65 ರಷ್ಟು ದಂಪತಿಗಳು ಸ್ಲೀಪ್ ಡಿವೋರ್ಸ್ ಮೊರೆ ಹೋಗುತ್ತಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಬಹಿರಂಗವಾಗಿದೆ. ಈ ಸಮೀಕ್ಷೆಗೆ 13 ದೇಶಗಳಲ್ಲಿ 30,000 ಕ್ಕೂ ಹೆಚ್ಚು ಜನರನ್ನು ಒಳಪಡಿಸಲಾಗಿದ್ದು, ಈ ಸಮೀಕ್ಷೆಯು ಜಾಗತಿಕ ನಿದ್ರೆಯ ಬಿಕ್ಕಟ್ಟನ್ನು ಬಹಿರಂಗಪಡಿಸಿದೆ. ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಶೇಕಡಾ 50 ರಷ್ಟು ದಂಪತಿಗಳು ಒಟ್ಟಿಗೆ ಮಲಗಲು ಇಷ್ಟ ಪಟ್ಟರೆ, ಇನ್ನು ಶೇಕಡಾ 50 ರಷ್ಟು ಪ್ರತ್ಯೇಕವಾಗಿ ಮಲಗಲು ಇಷ್ಟಪಡುತ್ತಾರೆ ಎನ್ನಲಾಗಿದೆ.

ದಂಪತಿಗಳಲ್ಲಿ ನಿದ್ರಾಭಂಗಕ್ಕೆ ಕಾರಣಗಳು ಇವು

ದಂಪತಿಗಳಿಬ್ಬರೂ ಬೇರೆ ಬೇರೆಯಾಗಿ ಮಲಗುವುದು ಅಸಾಮಾನ್ಯವೆಂದು ತೋರುತ್ತದೆಯಾದರೂ, ಆದರೆ ನಿದ್ರೆಯ ಗುಣಮಟ್ಟ ಮತ್ತು ಒಟ್ಟಾರೆ ಸಂಬಂಧದ ಯೋಗಕ್ಷೇಮವನ್ನು ಸುಧಾರಿಸುವಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ. ನಿದ್ರಾಭಂಗಕ್ಕೆ ಸಾಮಾನ್ಯ ಕಾರಣಗಳಲ್ಲಿ ಸಂಗಾತಿಯ ಗೊರಕೆ, ಶೇಕಡಾ 32 ರಷ್ಟು ಜೋರಾಗಿ ಉಸಿರಾಡುವುದು, ಶೇಕಡಾ 12 ರಷ್ಟು ಚಡಪಡಿಕೆ, ಶೇಕಡಾ 12 ರಷ್ಟು ಹೊಂದಿಕೆಯಾಗದ ನಿದ್ರೆಯ ವೇಳಾಪಟ್ಟಿಗಳು ಹಾಗೂ ಶೇಕಡಾ 8 ರಷ್ಟು ರಾತ್ರಿ ಹಾಸಿಗೆಯ ಮೇಲೆ ತಮ್ಮ ಹೆಚ್ಚು ಸಮಯ ಪರದೆಯಲ್ಲೇ ಕಳೆಯುವುದು ಸೇರಿವೆ. ಈ ಕಾರಣಗಳಿಂದಲೇ ಹೆಚ್ಚಿನವರು ಸ್ಲೀಪ್ ಡಿವೋರ್ಸ್ ಮೊರೆ ಹೋಗುತ್ತಿದ್ದಾರೆ ಎನ್ನಲಾಗಿದೆ. ನಿದ್ರೆ ಸರಿಯಾಗಿ ಆಗದಿರಲು ಶೇಕಡಾ 69 ರಷ್ಟು ಭಾರತೀಯರಿಗೆ ಒತ್ತಡವು ಪ್ರಮುಖ ಕಾರಣವಾಗಿದೆ. ಇನ್ನು ಉಳಿದಂತೆ ದಕ್ಷಿಣ ಕೊರಿಯಾ, ಥೈಲ್ಯಾಂಡ್, ಸಿಂಗಾಪುರ ಮತ್ತು ಜರ್ಮನಿ ಪ್ರಮುಖ ದೇಶಗಳಲ್ಲಿ ಒತ್ತಡವು ನಿದ್ರಾಭಂಗಕ್ಕೆ ಪ್ರಮುಖ ಕಾರಣವೆನ್ನುವುದು ವರದಿಯಾಗಿವೆ.

TAGGED:What is India's position in sleep divorce?
Share This Article
Facebook Twitter Copy Link Print
Previous Article ಮದುವೆಯ ಸಂಭ್ರಮದಲ್ಲಿದ್ದ ಉದ್ಯಮಿಯ ಬರ್ಬರ ಹತ್ಯೆ!
Next Article Lakshmi Hebbalkar ಮೊದಲ ಬಾರಿಗೆ ಬರೋಬ್ಬರಿ 3,000 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?