newsics.com
ಬೆಂಗಳೂರು : ಇನ್ಮುಂದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಲಾಗಿದೆ ಎಂದು ಜಾನ್ ಡೋ ಆದೇಶ ಹೊರಡಿಸಲಾಗಿದೆ.
ಏನಿದು ಜಾನ್ ಡೋ ಆದೇಶ..?
ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧ ಜಾರಿಯಾಗುವ ಕಾನೂನು ಕ್ರಮ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ-ಟ್ಯೂಬ್ ಹಾಗೂ ದೃಶ್ಯ ಮಾಧ್ಯಮ ಸೇರಿದಂತೆ ಮತ್ತಿತ್ತರ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಅವಹೇಳನಕಾರಿ ಹೇಳಿಕೆ ಮತ್ತು ಅಪಪ್ರಚಾರಕ್ಕೆ ಕಡಿವಾಣ ಹಾಕಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ. ನ್ಯಾಯಾಲಯ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸಿದ್ದೇ ಆದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.