ತೆಲಂಗಾಣ: ನಿರ್ಮಾಣ ಹಂತದ ಆರಂತಸ್ತಿನ ಕಟ್ಟಡ ಕುಸಿದು ಹಲವರು ಸಾವನ್ನಪ್ಪಿರುವ ಘಟನೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಭದ್ರಾಚಲಂನಲ್ಲಿ ನಡೆದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಹಳೆಯ ಕಟ್ಟಡದ ಮೇಲೆ ಐದು ಅಂತಸ್ತಿನ ಮಹಡಿಗಳನ್ನು ನಿರ್ಮಿಸುತ್ತಿದ್ದಾಗ ಈ ದುರಂತ ನಡೆದಿದೆ. ನಿರ್ಮಾಣದಲ್ಲಿನ ದೋಷಗಳಿಂದಲೇ ಕಟ್ಟಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಸಿದ ಕಟ್ಟಡದ ಪಕ್ಕದಲ್ಲೇ ದೇವಾಲಯವನ್ನೂ ಸಹ ನಿರ್ಮಿಸಲಾಗುತ್ತಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್, ಕಂದಾಯ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಟ್ಟಡದ ಅವಶೇಷಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿದ ನಂತರವೇ ಎಷ್ಟು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಮಾಹಿತಿ ತಿಳಿಯಬೇಕು.