newsics.com
ನವದೆಹಲಿ: ಭಾರತದ ಬ್ಯಾಂಕಿಂಗ್ ನಲ್ಲಿ ಏಪ್ರಿಲ್ 1 ರಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ಎಟಿಎಂ ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ ಆರ್ ಬಿಐ ಮಹತ್ತರವಾದ ಬದಲಾವಣೆ ಮಾಡಿದೆ. ಎಟಿಎಂ ಹಣ ವಿತ್ ಡ್ರಾ ಶುಲ್ಕವನ್ನು 2 ರೂ. ಹೆಚ್ಚಿಸಲಾಗಿದೆ.
ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್, ಎಟಿಎಂ ಇಂಟರ್ಚೇಂಜ್ ಅನ್ನು 17 ವಿಧಿಸಲಾಗಿತ್ತು. ಆದರೆ ಇದೀಗ 19 ರೂ.ಗಳಿಗೆ ಹೆಚ್ಚಿಸಲು ನಿರ್ಧಾರಿಸಿದೆ. ನಿಗದಿತ ಮಿತಿಯನ್ನು ಮೀರಿ ಹೆಚ್ಚು ಡ್ರಾ ಮಾಡಿದರೆ ಹೆಚ್ಚು ಶುಲ್ಕವನ್ನು ಪಾವತಿಸಬೇಕು.
ದೇಶೀಯ ಹಣಕಾಸು ಮತ್ತು ಹಣಕಾಸುಯೇತರ ವಹಿವಾಟುಗಳಿಗೆ ಇಂಟರ್ಚೇಂಜ್ ಶುಲ್ಕವನ್ನು ಪಾವತಿಸಬೇಕು. ಬ್ಯುಸಿನೆಸ್ ಸ್ಟ್ಯಾಂಡರ್ಡ್, ರಾಷ್ಟ್ರೀಯ ಹಣಕಾಸು ಸ್ವಿಚ್ ಎಟಿಎಂ ನೆಟ್ವರ್ಕ್ನ ಸದಸ್ಯರಿಗೆ ಕಳುಹಿಸಲಾದ ಪತ್ರವನ್ನು ಪರಿಶೀಲಿಸಿದರೆ ಇಂಟರ್ಚೇಂಜ್ ದರದ ಮೇಲೆ ಪ್ರತ್ಯೇಕ ಜಿಎಸ್ ಟಿ ವಿಧಿಸುತ್ತದೆ.