newsics.com
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ಇದು ಕೊಂಚ ಮಟ್ಟಿಗಾದರೂ ಸೆಖೆಯಿಂದ ಮುಕ್ತಿ ಸಿಕ್ಕಿತಲ್ಲ ಎಂಬ ಖುಷಿ ಜನರಿಗೆಯಿದೆ. ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ..
ಉಳಿದಂತೆ ಮಂಡ್ಯ, ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ ಇತ್ಯಾದಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮತ್ತು ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 32 ಡಿಗ್ರಿಯಷ್ಟಿರಲಿದೆ.
Satish Jarkiholi ಹೆಚ್‌ಡಿಕೆ – ದೇವೇಗೌಡರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ