newsics.com
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಗೆ ಇಬ್ಬರು ಬಲಿಯಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.
ರಸ್ತೆಯಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬಸ್ ಹರಿದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿ ಆಗಿದ್ದಾರೆ. ಕೆಎ 51 ಎಜೆ 6167 ನಂಬರಿನ ಬಸ್ ಇದಾಗಿದ್ದು, ಮೃತರ ಗುರುತು ಇನ್ನು ಪತ್ತೆ ಆಗಿಲ್ಲ. ಕೂಡಲೇ ಸ್ಥಳಕ್ಕೆ ಜೆಬಿ ನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಜೆ ಬಿ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.