newsics.com
ದಾವಣಗೆರೆ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಲೇಡಿ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಘಟನೆ ದಾವಣಗೆರೆ ತಾಲೂಕಿನ ತೋಳಹುಣಸೆ ಗ್ರಾಮದ ಬಳಿ ನಡೆದಿದೆ.
ದರೋಡೆ ಪ್ರಕರಣದ ಆರೋಪಿ ನವೀನ್ (31) ಎಂಬಾತನ ಸ್ಥಳ ಮಹಜರು ಮಾಡುವಾಗ ಆತ ಕಲ್ಲು ತೂರಾಟ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ನವೀನ್ ಮೇಲೆ ಕಳವು, ದರೋಡೆ, ಅತ್ಯಾಚಾರ, ಕೊಲೆ ಸೇರಿದಂತೆ ಒಟ್ಟು 51 ಪ್ರಕರಣಗಳು ದಾಖಲಾಗಿವೆ.